Categories: ಕರ್ನಾಟಕ

ಬಟ್ಟೆ ಕಾರ್ಖಾನೆಯಲ್ಲಿ 14 ಮಂದಿಗೆ ಕೊರೋನಾ ಸೋಂಕು

ಮದ್ದೂರು: ಮದ್ದೂರು ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ವಲಯದ ಗಿಲ್ ವುಡ್ ಸಿದ್ಧ ಉಡುಪು ತಯಾರಿಕಾ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 14ಕ್ಕೂ ಹೆಚ್ಚು ಮಂದಿ ಮಹಿಳಾ ಕಾರ್ಮಿಕರಿಗೆ ಕೊರೋನಾ ವೈರಸ್ ದೃಢಪಟ್ಟ ಹಿನ್ನೆಲೆಯಲ್ಲಿ  ಆತಂಕದ ವಾತಾವರಣ ಸೃಷ್ಠಿಯಾಗಿದೆ.

ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ತಾಲೂಕು ಆಸ್ಪತ್ರೆ ವತಿಯಿಂದ ಕೋವಿಡ್-19 ಪರೀಕ್ಷಗೆ ಒಳಪಡಿಸಿದ 70 ಮಂದಿ ಕಾರ್ಮಿಕರ ಪೈಕಿ 14 ಮಂದಿಗೆ ಕೊರೋನಾ ಪಾಸಿಟೀವ್ ಪ್ರಕರಣ ಕಂಡು ಬಂದ ಹಿನ್ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು ನಿರಾಕರಿಸಿದರು.

550ಕ್ಕೂ ಹೆಚ್ಚು ಮಂದಿ ಕಾರ್ಖಾನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಕೆಲ ಮಂದಿಗೆ ಕೊರೋನಾ ಪಾಸಿಟೀವ್ ಬಂದಿರುವ ಹಿನ್ನೆಲೆಯಲ್ಲಿ ಕಾರ್ಮಿಕರು ಕಾರ್ಖಾನೆಗೆ ತೆರಳಲು ನಿರಾಕರಿಸಿದರಲ್ಲದೇ ಪಾಸಿಟೀವ್ ಪ್ರಕರಣಗಳು ವರದಿಯಾಗಿರುವ ನೌಕರರಿಗೆ ವೇತನ ಸಹಿತ ರಜೆ ಘೋಷಿಸುವಂತೆ ಒತ್ತಾಯಿಸಿದರು.

ಇದಕ್ಕೆ ಸೊಪ್ಪು ಹಾಕದ ಅಧಿಕಾರಿಗಳು ಎಂದಿನಂತೆ ಕರ್ತವ್ಯ ನಿರ್ವಹಿಸುವ ನಿರ್ವಹಿಸುವ ನೌಕರರು ಎರಡು ದಿನಗಳಲ್ಲಿ ಕೊರೋನಾ ಪರೀಕ್ಷೆ ನಡೆಸುವಂತೆ ಸೂಚಿಸಿದರಲ್ಲದೇ ಯಾವುದೇ ರೋಗ ಲಕ್ಷಣಗಳು ಕಂಡು ಬರದ ನೌಕರರು ಕರ್ತವ್ಯಕ್ಕೆ ಹಾಜರಾಗುವಂತೆ ಸೂಚಿಸಿದರು.

ಸದರಿ ವಿಚಾರವಾಗಿ ಮದ್ದೂರು ತಹಶೀಲ್ದಾರ್ ವಿಜಯಕುಮಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದ ಕೆಲ ಕಾರ್ಮಿಕರು ಗಿಲ್ ವುಡ್ ಕಂಪನಿಯ ಆಡಳಿತ ಮಂಡಳಿಯ ಕಾರ್ಮಿಕ ವಿರೋಧಿ ನೀತಿಯನ್ನು ವಿವರಿಸಿದರಲ್ಲದೇ ವೇತನ ಸಹಿತ ರಜೆ ಘೋಷಿಸುವಂತೆ ಆದೇಶಿಸಲು ಮನವಿ ಮಾಡಿದರು.

ಕಾರ್ಮಿಕರ ಬೇಡಿಕೆಯನ್ವಯ ಆಡಳಿತ ಮಂಡಳಿಗೆ ಎಚ್ಚರಿಕೆ ನೀಡಿದ ತಹಶೀಲ್ದಾರ್ ವಿಜಯಕುಮಾರ್ ಸೋಮವಾರದಿಂದಲೇ ಕಾರ್ಖಾನೆಗೆ ರಜೆ ಘೋಷಿಸುವಂತೆ ಸೋಂಕಿತ ನೌಕರರನ್ನು ಸೂಕ್ತ ಚಿಕಿತ್ಸೆಗೆ ರವಾನಿಸಲು ಆದೇಶಿಸಿದ ಹಿನ್ನೆಲೆಯಲ್ಲಿ ಪರಿಸ್ಥಿತಿ ತಿಳಿಯಾಯಿತು.

Desk

Recent Posts

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

8 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

32 mins ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

2 hours ago

ವಾಸವಿ ಯುವಜನ ಸಂಘದ ವತಿಯಿಂದ ಪ್ರಸಾದ ವಿತರಣೆ

ವಾಸವಿ ಜಯಂತಿ ಪ್ರಯುಕ್ತ ನಗರದ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಮಜ್ಜಿಗೆ, ಕೋಸಂಬರಿ ವಿತರಣೆ ಮಾಡಲಾಯಿತೆಂದು ವಾಸವಿ…

2 hours ago

ನಟಿ ರಶ್ಮಿಕಾ ಟ್ವೀಟ್​ಗೆ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ವಿವಾದಾದ್ಮಕ ಹೇಳಿಕೆ

ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ತಮ್ಮದೇ ಅದ ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ವಿವಿಧ ಭಾಷೆಗಳಲ್ಲಿ ನಟಿಸಿ ಸೈ…

2 hours ago