News Karnataka Kannada
Sunday, May 05 2024
ಬೆಂಗಳೂರು

ಬಾಯ್ಲರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮತ್ತಿಬ್ಬರು ಸಾವು,

Gas
Photo Credit :

ಬೆಂಗಳೂರು: ಮಾಗಡಿ ರಸ್ತೆಯ ಗೋಪಾಲಯ್ಯಪುರದ 5ನೇ ಅಡ್ಡರಸ್ತೆಯಲ್ಲಿರುವ ಎಂ.ಎಂ.ಫುಡ್ ಪ್ರಾಡಕ್ಟ್ ಘಟಕದಲ್ಲಿ ಸೋಮವಾರ ಸಂಭವಿಸಿದ್ದ ಬಾಯ್ಲರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮಾಲೀಕ ಸೇರಿದಂತೆ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಕೊನೆಯುಸಿರೆಳೆದಿದ್ದಾರೆ.

ಎಂ.ಎಂ.ಫುಡ್ ಪ್ರಾಡಕ್ಟ್ ಕಂಪನಿ ಪಾಲುದಾರ ಸಚಿನ್ (41), ಗೋಪಾಲಪುರದ ಧನಲಕ್ಷ್ಮೀ (52) ಮೃತ ದುರ್ದೈವಿಗಳಾಗಿದ್ದಾರೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತೊಬ್ಬ ಕೆಲಸದಾಕೆ ಶಾಂತಿ ಅವರು ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಇದೇ ಘಟನೆಯಲ್ಲಿ ಸೋಮವಾರ ಬಿಹಾರ ಮೂಲದ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದರು. ಖಾದ್ಯ ತಿನಿಸು ತಯಾರಿಕಾ ಘಟಕದಲ್ಲಿ ಆಕಸ್ಮಿಕವಾಗಿ ಬಾಯ್ಲರ್ ಸಿಡಿದು ಘಟಕದಲ್ಲಿ ಕೆಲಸ ಮಾಡುತ್ತಿದ್ದವರಲ್ಲಿ ಇಬ್ಬರು ಸ್ಥಳದಲ್ಲೇ ಸಜೀವ ದಹನವಾಗಿದ್ದರು. ಘಟನೆಯಲ್ಲಿ ಮೂವರು ತೀವ್ರವಾಗಿ ಗಾಯಗೊಂಡು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು, ಇದೀಗ ಮೂವರ ಪೈಕಿ ಇಬ್ಬರು ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

ಘಟನೆಯಲ್ಲಿ ಈ ಹಿಂದೆ ಸಾವನ್ನಪ್ಪಿದ್ದ ಮನೀಶ್ ಕುಮಾರ್ ಹಾಗೂ ಸೌರವ್ ಅವರ ಮರಣೋತ್ತರ ಪರೀಕ್ಷೆ ನಡೆಸಲು ಅವರ ಕುಟುಂಬಸ್ಥರ ಆಗಮನಕ್ಕಾಗಿ ಪೊಲೀಸರು ಕಾಯುತ್ತಿದ್ದಾರೆಂದು ತಿಳಿದುಬಂದಿದೆ. ಘಟನೆ ಬಳಿಕ ಘಟಕದ ಮಾಲೀಕ ವಿಜಯ್ ಮಹ್ತಾ ನಾಪತ್ತೆಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು