Categories: ಕರ್ನಾಟಕ

ಬೆಂಗಳೂರಿನಲ್ಲಿ ನಾಪತ್ತೆಯಾಗಿರುವ 681 ವಿದೇಶಿಗರಿಗಾಗಿ ಪೋಲೀಸರ ಹುಡುಕಾಟ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಂದು ನೆಲೆಯೂರಿರುವ 681 ವಿದೇಶಿಯರು ನಾಪತ್ತೆಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಅವರು ವೀಸಾ ಅವಧಿ ಮುಗಿದ ಬಳಿಕವೂ ಇಲ್ಲಿ ವಿದೇಶಿಗರು ಅಕ್ರಮವಾಗಿ ನೆಲೆಸಿದ್ದು ಇದುವರೆಗಿನ ಮಾಹಿತಿ ಪ್ರಕಾರ 681 ಜನ ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದು ಅಂತಹವರನ್ನ ಪತ್ತೆ ಹಚ್ಚಿ ವಾಪಸ್ ಕಳಿಸುವ ಕೆಲಸ ಮಾಡಲಾಗುವುದು. ಪ್ರಾದೇಶಿಕ ವಿದೇಶಿ ನೋಂದಣಿ ಕೇಂದ್ರ (ಎಫ್ ಆರ್ ಆರ್ ಒ) ಮೂಲಕ ಮಾಹಿತಿ ಪಡೆದು ಪತ್ತೆ ಮಾಡಲಾಗುವುದು ಎಂದರು. ವಿದ್ಯಾಭ್ಯಾಸ ಸೋಗಿನಲ್ಲಿ ಬೆಂಗಳೂರಿಗೆ ಬರುವ ವಿದೇಶಿ ವಿದ್ಯಾರ್ಥಿಗಳು ಒಂದು ಕಡೆ ನೆಲೆಸಿ, ವೀಸಾ, ಪಾಸ್ ಪೋರ್ಟ್ ಅವಧಿ ಮುಗಿದ ಬಳಿಕ ಸ್ಥಳೀಯ ಬೇರೆ ವಿಳಾಸಕ್ಕೆ ಶಿಫ್ಟ್ ಆಗುತ್ತಾರೆ. ಅವರ ವಿಳಾಸ ಪತ್ತೆ ಹಚ್ಚಿ ಕಾನೂನುಬಾಹಿರವಾಗಿ ನೆಲೆಯೂರಿರುವ ವಿದೇಶಿಯರನ್ನು ಪತ್ತೆ ಮಾಡಿ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಜೆ. ಸಿ. ನಗರ ಪೊಲೀಸ್ ಠಾಣೆಯಲ್ಲಿ ವಿದೇಶಿ ಪ್ರಜೆ ಸಾವು ಪ್ರಕರಣ ಸಂಬಂಧ ಈಗಾಗಲೇ ಐದು ಆರೋಪಿಗಳನ್ನ ಬಂಧಿಸಲಾಗಿದೆ‌‌. ಘಟನೆ ಸಂಬಂಧ ಕಾಂಗೋ ರಾಯಭಾರಿ ಕಚೇರಿ ಅಧಿಕಾರಿಗಳು ಭೇಟಿಯಾಗಿದ್ದಾರೆ. ನಮ್ಮ ತನಿಖೆ ಬಗ್ಗೆ ಕಾಂಗೋ ಆಧಿಕಾರಿಗಳು ಸಂಪೂರ್ಣವಾಗಿ ತೃಪ್ತಿ ಹೊಂದಿದ್ದಾರೆ. ಬೆಂಗಳೂರು ಪೊಲೀಸರು ಉತ್ತಮ ತನಿಖೆ ನಡೆಸಿದ್ದಾರೆ ಎಂದು ಈ ವಿದೇಶ ಅಧಿಕಾರಿಗಳು ಮೆಚ್ಚುಗೆ ಸೂಚಿಸಿದ್ದಾರೆ. ಪ್ರಕರಣದಲ್ಲಿ ಇನ್ನೂ ಕೆಲ ಆರೋಪಿಗಳ ಬಂಧನ ಆಗಬೇಕಿದೆ ಎಂದು ಕಮಲ್ ಪಂತ್ ಮಾಹಿತಿ ನೀಡಿದರು.
ಜೆ ಸಿ ನಗರ ಪೊಲೀಸರ ವಶದಲ್ಲಿ ಇದ್ದ ಈ ವಿದೇಶೀ ಯುವಕ ಎದೆನೋವಿನಿಂದ ಸಾವನ್ನಪ್ಪಿದ್ದು ಪೋಸ್ಟ್‌ ಮಾರ್ಟಂ ವರದಿ ತಿಳಿಸಿದೆ ಎಂದರು. ಅಕ್ರಮವಾಗಿ ನೆಲೆಸಿರುವ ಬಹುತೇಕ ವಿದೇಶಿ ಪ್ರಜೆಗಳು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು, ಕೆಲವರು ಸೈಬರ್ ಕ್ರೈಂ, ಮಾದಕ ವಸ್ತು ಮಾರಾಟ, ವೇಶ್ಯಾವಾಟಿಕೆ ದಂಧೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಅಂದಾಜು 7-8 ಸಾವಿರ ಮಂದಿ ವಿದೇಶಿ ಪ್ರಜೆಗಳಿದ್ದು, ಈ ಪೈಕಿ ನೈಜಿರಿಯಾ, ಕಾಂಗೋ ದೇಶದ ಪ್ರಜೆಗಳೇ ಅಧಿಕವಾಗಿದ್ದಾರೆ ಎಂಬ ಮಾಹಿತಿ ಇದೆ ಎಂದ ಅವರು ಇವರನ್ನು ಪತ್ತೆ ಹಚ್ಚಿ ಗಡೀಪಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

Indresh KC

Recent Posts

ಬೀದರ್: ಸಂಭ್ರಮದಿಂದ ವಿಶ್ವಗುರು ಬಸವಣ್ಣನವರ ಜಯಂತಿ‌ ಆಚರಣೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿ‌ ನಗರದಲ್ಲಿ ಸಡಗರ, ಸಂಭ್ರಮದಿಂದ ಆಚರಿಸಲಾಯಿತು.

13 mins ago

ಡಿ ಬಾಸ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್ ಔಟ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಹು ನಿರೀಕ್ಷಿತ ಡೆವಿಲ್ ಚಿತ್ರದ ಮೇಕಿಂಗ್‌ ರಿಲೀಸ್ ಆಗಿದೆ. ಸಿನಿಮಾದ ತೆರೆ ಹಿಂದಿನ ಗ್ಲಿಂಪ್ಸ್ ಇದಾಗಿದೆ.…

21 mins ago

ಧಾರವಾಡದ ಪೇಡಾ ಈ ಬಾರಿ ಯಾರ ಬಾಯಿಗೆ ಬೀಳಲಿದೆ?; ಜೋಶಿ ವಿರುದ್ಧ ವಿನ್ ಆಗ್ತಾರಾ ವಿನೋದ್

ಕರ್ನಾಟಕದ ವಾಣಿಜ್ಯ ನಗರಿ ಎಂದೇ ಪ್ರಸಿದ್ಧಿ ಪಡೆದ ಜಿಲ್ಲೆ ಧಾರವಾಡ. ಬಾಯಿ ನೀರೂರಿಸುವ ಧಾರವಾಡ ಪೇಡಾಕ್ಕೆ ಧಾರವಾಡವಲ್ಲದೆ ಬೇರೆ ಸಾಟಿಯಿಲ್ಲ,…

23 mins ago

ನಿತ್ಯಾನಂದ ಒಳಕಾಡು ನೇತೃತ್ವದಲ್ಲಿ 3 ವಾರಸುದಾರರಿಲ್ಲದ ಶವಗಳ ಅಂತ್ಯಸಂಸ್ಕಾರ

ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಮೂರು ಅಪರಿಚಿತ ವ್ಯಕ್ತಿಗಳ ಶವದ ಅಂತ್ಯಸಂಸ್ಕಾರವನ್ನು ಬೀಡಿನಗುಡ್ಡೆಯ ಹಿಂದು ರುದ್ರಭೂಮಿಯಲ್ಲಿ ಗೌರಯುತವಾಗಿ ನಡೆಸಲಾಯಿತು.

43 mins ago

ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಮಹಾಲಕ್ಷ್ಮಿ ಯೋಜನೆಯಡಿ 1 ಲಕ್ಷ ರೂ. ಜಮಾ

ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದರೆ ಇಬ್ಬರು ಹೆಂತಿಯರು ಇರುವವರಿಗೆ 2 ಲಕ್ಷ ರೂ. ಆರ್ಥಿಕ ನೆರವು…

58 mins ago

ಕಿಂಗ್ಸ್‌-ರಾಯಲ್ಸ್‌ ಕದನದಲ್ಲಿ ಕಲಾಶ್‌ನಿಕಾವೋ: ಕೊಹ್ಲಿ ಕೆಣಕಿ ಉಳಿದವರುಂಟೇ

ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಆರ್‌ ಸಿ ಬಿ ತಂಡ ಪಂಜಾಬ್ ಕಿಂಗ್ಸ್ ಅನ್ನು 60 ರನ್‌ಗಳಿಂದ…

1 hour ago