News Karnataka Kannada
Monday, April 29 2024
ಕರ್ನಾಟಕ

ಬೆಂಗಳೂರು-ಮೈಸೂರು ದಶ ಪಥಗಳ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್ ಒಳಗೆ ಪೂರ್ಣ

Bmic Highway
Photo Credit :

ನವದೆಹಲಿ: ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ದಶ ಪಥಗಳ ಆರ್ಥಿಕ ಕಾರಿಡಾರ್ ನಿರ್ಮಾಣ ಕಾಮಗಾರಿಯನ್ನು 2022ರ ಅಕ್ಟೋಬರ್ ಒಳಗೆ ಪೂರ್ಣಗೊಳಿಸಲಾಗುವುದು ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಬುಧವಾರ ತಿಳಿಸಿದರು.
‘10 ಪಥಗಳ ಬೆಂಗಳೂರು-ಮೈಸೂರು ಆರ್ಥಿಕ ಕಾರಿಡಾರ್ ಅನ್ನು ದಾಖಲೆಯ ವೇಗದಲ್ಲಿ ನಿರ್ಮಿಸಲಾಗುತ್ತಿದೆ. ₹8,172 ಕೋಟಿ ವೆಚ್ಚದ ಆರ್ಥಿಕ ಕಾರಿಡಾರ್ 2022ರ ಅಕ್ಟೋಬರ್‌ ಒಳಗೆ ಪೂರ್ಣಗೊಳ್ಳುವ ಸಾಧ್ಯತೆಯಿದೆ. ಇದು ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಈಗಿನ 3 ಗಂಟೆಯಿಂದ ಒಂದೂವರೆ ಗಂಟೆಗೆ (90 ನಿಮಿಷಕ್ಕೆ) ತಗ್ಗಿಸುತ್ತದೆ’ ಎಂದು ಗಡ್ಕರಿ ಟ್ವೀಟ್ ಮಾಡಿದ್ದಾರೆ.
ಎರಡು ನಗರಗಳ ನಡುವಿನ ರಸ್ತೆ ಯೋಜನೆಯನ್ನು ಭಾರತಮಾಲಾ ಪರಿಯೋಜನ ಹಂತ -1ರ ಅಡಿಯಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಈ ಯೋಜನೆಯನ್ನು ಎರಡು ಪ್ಯಾಕೇಜ್‌ಗಳಾಗಿ ಕೈಗೆತ್ತಿಕೊಳ್ಳಲಾಗಿದ್ದು, ಮೊದಲನೆಯ ಪ್ಯಾಕೇಜ್‌ನಲ್ಲಿ ಬೆಂಗಳೂರಿನಿಂದ ಮದ್ದೂರು ತಾಲ್ಲೂಕಿನ ನಿಡಘಟ್ಟವರೆಗೆ ಮತ್ತು ಎರಡನೆಯ ಪ್ಯಾಕೇಜ್‌ನಲ್ಲಿ ನಿಡಘಟ್ಟದಿಂದ ಮೈಸೂರಿನವರೆಗೆ ಕಾಮಗಾರಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 5 / 5. Vote count: 1

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು