ಬೆಳಗಾವಿ: ನಗರದ ಕೇಂದ್ರ ಬಸ್ ನಿಲ್ದಾಣ ಹಾಗೂ ತರಕಾರಿ ಮಾರುಕಟ್ಟೆ ನಡುವೆ ನಿರ್ಮಿಸಲಾದ ಇಂದಿರಾ ಕ್ಯಾಂಟೀನನ್ನು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಲೋಕಾರ್ಪಣೆ ಮಾಡಿದರು.
ಈ ವೇಳೆ ಶಾಸಕ ಫಿರೋಜ್ ಸೇಠ್, ಮೇಯರ್ ಬಸಪ್ಪ ಚಿಕ್ಕಲದಿನ್ನಿ, ಉಪ ಮೇಯರ್ ಮಧುಶ್ರೀ ಪೂಜಾರಿ, ಜಿಲ್ಲಾಧಿಕಾರಿ ಎಸ್. ಜಿಯಾವುಲ್ಲಾ, ಪಾಲಿಕೆ ಆಯುಕ್ತ ಶಶಿಧರ ಕುರೇರ, ಪೊಲೀಸ್ ಕಮಿಷನರ್ ಡಿ.ಸಿ. ರಾಜಪ್ಪ, ನಗರಪಾಲಿಕೆ ಸದಸ್ಯರು ಇದ್ದರು.