ಕರ್ನಾಟಕ

ಬೆಳೆ ಹಾನಿ ತಡೆಯಲು ಮಂಗಗಳನ್ನು ಸಾಯಿಸಿದ್ದ ದಂಪತಿ ಬಂಧನ

 

ಹಾಸನ, – ತಮ್ಮ ತೋಟದ ಬೆಳೆ ಹಾನಿ ಮಾಡುತ್ತಿವೆಯೆಂದು ಮಂಗಗಳನ್ನೇ ಹಿಡಿದು ಕೊಂದು ಹಾಕಿದ್ದ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಲೀಸರು ದಂಪತಿ ಸೇರಿ ಐದು ಮಂದಿಯನ್ನು ಬಂಧಿಸಿದ್ದಾರೆ. ಅರೆಹಳ್ಳಿ ಠಾಣೆ ಪೊಲೀಸರು ಉಗನೆ ಗ್ರಾಮದ ಯಶೋಧ- ರಾಮು ದಂಪತಿ ಹಾಗೂ ಪ್ರಸನ್ನ, ರುದ್ರೇಗೌಡ ಮತ್ತು ಚಾಲಕ ಮಂಜು ಎಂಬುವವರನ್ನು ಬಂಧಿಸಿದ್ದು ಬೆಳೆಗಳನ್ನು ಹಾಳು ಮಾಡುತ್ತಿವೆ ಎಂದು ಮಂಗಗಳನ್ನು ಸ್ಥಳಾಂತರ ಮಾಡಲು ಜಮೀನಿನ ಮಾಲೀಕ ಪ್ರಸನ್ನ, ರುದ್ರೇಗೌಡ ಎಂಬುವರು ಯಶೋಧ-ರಾಮು ದಂಪತಿಗೆ 40 ಸಾವಿರಕ್ಕೆ ಗುತ್ತಿಗೆ ನೀಡಿದ್ದರು.
ಜು.28ರಂದು ಆಹಾರದ ಆಸೆ ತೋರಿಸಿ ಯಶೋಧ ಮತ್ತು ರಾಮು ದಂಪತಿ 50ಕ್ಕೂ ಹೆಚ್ಚು ಕೋತಿಗಳನ್ನು ಸೆರೆ ಹಿಡಿದು ಒಂದು ಚೀಲದಲ್ಲಿ ಬಂಧಿಸಿಟ್ಟಿದ್ದರು. ಆ ಸಂದರ್ಭದಲ್ಲಿ ಬರೋಬ್ಬರಿ 38 ಕೋಟಿಗಳು ಉಸಿರುಗಟ್ಟಿ ಮೃತಪಟ್ಟಿದ್ದವು. ಇದರಿಂದ ಭಯಭೀತರಾದ ಆರೋಪಿಗಳು ಅವುಗಳನ್ನು ರಾತ್ರೋ ರಾತ್ರಿ ಹಾಸನ ಜಿಲ್ಲೆ ಬೇಲೂರು ತಾಲ್ಲೂಕಿನ ಬಿಕ್ಕೋಡು ಸಮೀಪದ ಚೌಡಹಳ್ಳಿ ಗ್ರಾಮದಲ್ಲಿ ಬಿಸಾಡಿ ಪರಾರಿಯಾಗಿದ್ದರು.ಮೂಕ ಪ್ರಾಣಿಗಳ ದಾರುಣ ಹತ್ಯೆ ಕಂಡು ಜನರು ರೊಚ್ಚಿಗೆದ್ದಿದ್ದು , ಆ ಸಂದರ್ಭದಲ್ಲಿ ನಿತ್ರಾಣಗೊಂಡಿದ್ದ ಹಲವು ಮಂಗಗಳಿಗೆ ಸ್ಥಳೀಯರು ಆರೈಕೆ ಮಾಡಿದ್ದಾರೆ. ಈ ಬಗ್ಗೆ ಅರಣ್ಯ ಇಲಾಖೆ ಹಾಗೂ ಅರೆಹಳ್ಳಿ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದರು. ಇದೀಗ ಕಾರ್ಯಾಚರಣೆ ನಡೆಸಿ ಐದು ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಮಂಗಗಳನ್ನು ಸ್ಥಳಾಂತರ ಮಾಡುವಾಗ ಉಸಿರುಗಟ್ಟಿ ಸಾವನ್ನಪ್ಪಿವೆ ಎಂದು ಪೊಲೀಸರ ಮುಂದೆ ಆರೋಪಿಗಳು ತಿಳಿಸಿದ್ದಾರೆ. ಮಂಗಗಳು ಮೃತಪಟ್ಟಿರುವುದು ತಿಳಿದು ಆಂಜನೇಯ ದೇಗುಲದಲ್ಲಿ ಪೂಜೆ ಮಾಡಿಸಿದ್ದಾಗಿ ಪ್ರಾಣಿ ಹಂತಕರು ವಿಚಾರಣೆ ವೇಳೆ ತಿಳಿಸಿದ್ದಾರೆ. ಈ ಪ್ರಕರಣವು ರಾಜ್ಯಾದ್ಯಂತ ಪ್ರಾಣಿ ಪ್ರಿಯರ ಆಕ್ರೋಶಕ್ಕೆ ಕಾರಣವಾಗಿದ್ದು ರಾಜ್ಯ ಹೈ ಕೋರ್ಟು ಸುಮೋಟು ಪ್ರಕರಣ ದಾಖಲಿಸಿಕೊಂಡಿತ್ತು.

Indresh KC

Recent Posts

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

53 seconds ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

24 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

34 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

39 mins ago

ಹೊಸ ರುಚಿ: ಅವಲಕ್ಕಿ ಹುಳಿ ಮಾಡುವುದು ಹೇಗೆ?

ಗಡಿಬಿಡಿಯ ಜೀವನದಲ್ಲಿ ಬೆಳಗ್ಗಿನ ಉಪಹಾರ ಮಾಡಿಕೊಂಡು ಆಫೀಸಿಗೆ ಹೋಗುವುದೇ ಸವಾಲ್. ಇಂತಹ  ಸಂದರ್ಭದಲ್ಲಿ ಅವಲಕ್ಕಿ ಇದ್ದರೆ ಅದರಿಂದ ಹುಳಿ ತಯಾರಿಸಿ…

46 mins ago

ಬಾವಿಗೆ ಬಿದ್ದ ಮಗುವನ್ನು ರಕ್ಷಿಸಿದ ಯುವಕನಿಗೆ ಮೆಚ್ಚುಗೆಯ ಸುರಿಮಳೆ

ಸರಪಾಡಿಯ ಹಂಚಿಕಟ್ಟೆಯಲ್ಲಿ ಬಾವಿಗೆ ಬಿದ್ದ ಮಗುವೊಂದನ್ನು ತನ್ನ ಪ್ರಾಣದ ಹಂಗನ್ನು ತೊರೆದು ತುಂಡಾಗುವ ಸ್ಥಿತಿಯಲ್ಲಿದ್ದ ಹಳೆಯ ಹಗ್ಗವನ್ನು ಬಳಸಿ ಮೇಲಕ್ಕೆತ್ತಿದ…

56 mins ago