Categories: ಕರ್ನಾಟಕ

ಬ್ರಹ್ಮಾವರದಲ್ಲಿ ಸುಪಾರಿ ನೀಡಿ ಪತ್ನಿ ಕೊಲೆ ; ಪತಿ , ಮತ್ತೊಬ್ಬ ಬಂಧನ

ಉಡುಪಿ : ಕರಾವಳಿ ಪ್ರದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಬ್ರಹ್ಮಾವರದ ಅಪಾರ್ಟ್‌ ಮೆಂಟ್‌ ನಲ್ಲಿ ಕೊಲೆಯಾಗಿದ್ದ ಗೃಹಿಣಿ ವಿಶಾಲ ಗಾಣಿಗ ಹಂತಕರ ಹೆಡೆಮುರಿ ಕಟ್ಟುವಲ್ಲಿ ಉಡುಪಿ ಪೊಲೀಸರು ಕೊನೆಗೂ ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಅಮಾಯಕನಂತೆ ನಟಿಸುತಿದ್ದ ಪತಿಯೇ ಸುಪಾರಿ ನೀಡಿ ಬಾಡಿಗೆ ಹಂತಕರಿಂದ ಕೊಲೆ ಮಾಡಿಸಿರುವುದು ಸಾಬೀತಾಗಿದ್ದು ಆರೋಪಿ ರಾಮಕೃಷ್ಣ ಗಾಣಿಗನನ್ನು ಬಂಧಿಸಿದ್ದಾರೆ.
ಇದೀಗ ಪೊಲೀಸ್ ಬಂಧನದಲ್ಲಿದ್ದ ರಾಮಕೃಷ್ಣನನ್ನು ಪೊಲೀಸರು ಮಂಗಳವಾರ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡಬೇಕೆಂದು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರಿಂದ ಆರೋಪಿ ರಾಮಕೃಷ್ಣನನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಕೊಲ್ಲಿ ರಾಷ್ಟ್ರದಲ್ಲಿ ತನ್ನ ಪತ್ನಿ ಮಕ್ಕಳೊಂದಿಗೆ ನೆಲೆಸಿದ್ದ ಆರೋಪಿ ರಾಮಕೃಷ್ಣ ಉಡುಪಿ ಜಿಲ್ಲೆಯ ಕೆಲವೆಡೆ ಆಸ್ತಿ ಮಾಡಿದ್ದ. ಇದನ್ನು ನೋಡಿಕೊಳ್ಳಲು ಪತ್ನಿ ವಿಶಾಲ ಗಾಣಿಗರನ್ನು ಕಳಿಸುತಿದ್ದ. ರಾಮಕೃಷ್ಣನ ಆಕ್ರಮ ಸಂಬಂಧ, ಆಸ್ತಿ ವ್ಯವಹಾರವೇ ವಿಶಾಲ ಕೊಲೆಗೆ ಕಾರಣ‌ವಾಯಿತಾ? ಎಂಬ ಬಗ್ಗೆ ತನಿಖೆ ಸಾಗಿದೆ. ಸಂಶಯದ ಹಿನ್ನೆಲೆಯಲ್ಲಿ ಪತಿಯನ್ನು ಕೆಲ ದಿನಗಳ ಹಿಂದೆಯೇ ವಶಕ್ಕೆ ಪಡೆದಿರುವ ಪೊಲೀಸರು, ನಿನ್ನೆ ಬಂಧಿಸಿದ್ದಾಗಿ ಮಾಹಿತಿ ನೀಡಿದ್ದಾರೆ.
ಕೊಲೆಗೆ ಸುಪಾರಿ ಪಡೆದ ಆರೋಪಿಗಳಲ್ಲಿ ಓರ್ವನನ್ನು ಪೊಲೀಸ್ ತಂಡ ಉತ್ತರ ಪ್ರದೇಶದಲ್ಲಿ ಬಂಧಿಸಿದ್ದು ಉಡುಪಿಗೆ ಕರೆದುಕೊಂಡು ಬರಲಾಗುತ್ತಿದೆ ಎಂದು ಪೊಲೀಸರು ಹೇಳಿದ್ದು ಇನ್ನೋರ್ವ ಹಂತಕ ತಲೆಮರೆಸಿಕೊಂಡಿದ್ದು, ಆತನಿಗಾಗಿ ಪೊಲೀಸರಿಂದ ಶೋಧ ಕಾರ್ಯ ಮುಂದುವರೆದಿದೆ. ಹಾಡಹಗಲೇ ನಡೆದಿದ್ದ ಈ ಕೊಲೆಯು ತಲ್ಲಣ ಸೃಷ್ಟಿಸಿದ್ದು ಇದನ್ನು ಬೇಧೀಸಲು ಪೋಲೀಸರು ನಾಲ್ಕು ತಂಡಗಳನ್ನು ರಚಿಸಿದ್ದರು.

Indresh KC

Recent Posts

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

1 hour ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

2 hours ago

ರಸ್ತೆಯಲ್ಲಿ ಸಿಕ್ಕಿದ್ದ ಪೆನ್‌ಡ್ರೈವ್ ಅನ್ನು ಶಾಸಕ ಎ.ಮಂಜುಗೆ ಕೊಟ್ಟಿದ್ದೆ: ನವೀನ್ ಗೌಡ

ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್‌ ಪ್ರಕರಣ ಹಂಚಿಕೆ ಆರೋಪ ಎದುರಿಸುತ್ತಿರುವ ನವೀನ್ ಗೌಡ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿರುವ ಪೋಸ್ಟ್ ಭಾರೀ…

2 hours ago

ಡಿಫರೆಂಟ್ ಗೆಟಪ್‌ನಲ್ಲಿ ಎಂಟ್ರಿ ಕೊಟ್ಟ ನಟ ಮಿತ್ರ

ಕನ್ನಡದ ಹಾಸ್ಯನಟ ಮಿತ್ರ ಇದೀಗ ಪ್ರಜ್ವಲ್ ದೇವರಾಜ್ ನಟನೆಯ ‘ಕರಾವಳಿ’ ಚಿತ್ರದಲ್ಲಿ ಮುಖ್ಯ ಪಾತ್ರವೊಂದಕ್ಕೆ ಬಣ್ಣ ಹಚ್ಚಿದ್ದಾರೆ.

2 hours ago

ಶೀಘ್ರದಲ್ಲೇ ಎರ್ನಾಕುಲಂನಿಂದ ಬೆಂಗಳೂರಿಗೆ ವಂದೇ ಭಾರತ್ ಆರಂಭ

ಲೋಕಸಭೆ ಚುನಾವಣೆ ಮುಗಿದ ಬಳಿಕ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಶೀಘ್ರದಲ್ಲೇ ಕೊಚ್ಚಿಯ ಎರ್ನಾಕುಲಂನಿಂದ ಬೆಂಗಳೂರಿಗೆ ಸಂಚಾರ ಪ್ರಾರಂಭಿಸಲಿದೆ.

3 hours ago

ಅಂಬೇಡ್ಕರ್ ಜಯಂತೋತ್ಸವದ ಅಂಗವಾಗಿ ಗ್ರಾಮೀಣ ಕ್ರೀಡಾಕೂಟಕ್ಕೆ ಚಾಲನೆ

ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಅಂಗವಾಗಿ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದಲ್ಲಿ ವಿಮೋಚನಾ ಯುವಕರ ಸಂಘದ…

3 hours ago