Categories: ಕರ್ನಾಟಕ

ಬ್ಲಾಕ್‌ ಫಂಗಸ್‌ ಗೆ ಹೆದರಿ ದಂಪತಿ ಆತ್ಮಹತ್ಯೆ

ಮಂಗಳೂರು: ಕೊರೊನಾಪೀಡಿತ ದಂಪತಿಗಳು  ನಗರ ಪೊಲೀಸ್ ಕಮೀಷನರ್​​ಗೆ ಕರೆ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸುರತ್ಕಲ್​ನ ಚಿತ್ರಾಪುರದ ರಹೆಜಾ ಅಪಾರ್ಟ್​​ಮೆಂಟ್​​​ನಲ್ಲಿ ನಡೆದಿದೆ.
ಆತ್ಮಹತ್ಯೆಗೆ ಶರಣಾದವರನ್ನು ರಮೇಶ್ ಕುಮಾರ್ ಮತ್ತು ಗುಣ ಎಂದು ಗುರುತಿಸಲಾಗಿದೆ. ರಮೇಶ್ ಕುಮಾರ್​​ ಮುಂಜಾನೆ 6 ಗಂಟೆ ಸುಮಾರಿಗೆ ಮಂಗಳೂರು ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರಿಗೆ ಕರೆ ಮಾಡಿ ನಾವಿಬ್ಬರೂ ಕೊರೊನಾ ಪೀಡಿತರಾಗಿದ್ದೇವೆ. ನನ್ನ ಹೆಂಡತಿ ಈಗಾಗಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದೀಗ ನಾನು ಕೂಡಾ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ‌. ನಮ್ಮ ಅಂತ್ಯಸಂಸ್ಕಾರ ಮಾಡಿ ಎಂದು ಮನವಿ ಮಾಡಿದ್ದರು.ಕೂಡಲೇ ಪೊಲೀಸ್ ಕಮೀಷನರ್ ಆತನಿಗೆ ಕರೆ ಮಾಡಿದರೂ ಅವರು ಕರೆ ಸ್ವೀಕರಿಸಿರಲಿಲ್ಲ. ಆದರೆ ಪೊಲೀಸ್ ಕಮೀಷನರ್ ಆತನ ಜೀವ ಉಳಿಸಲು ಸಾಮಾಜಿಕ ಜಾಲತಾಣದಲ್ಲಿ ಈ ಮಾಹಿತಿ ನೀಡಿದ್ದರಲ್ಲದೆ, ಪೊಲೀಸ್ ಇಲಾಖೆಯ ಮೂಲಕವೂ ಆತನ ಪತ್ತೆಗೆ ಪ್ರಯತ್ನಿಸಿದ್ದಾರೆ. ಕೊನೆಗೆ ಆತನ ನಿವಾಸ ಪತ್ತೆಯಾದರೂ, ಅಷ್ಟರಲ್ಲಿ ಇಬ್ಬರು ನೇಣಿಗೆ ಶರಣಾಗಿದ್ದರು.
​​​ಮನೆಯಲ್ಲಿ ಪತ್ನಿ ಬರೆದಿರುವ ಡೆತ್​​​​ನೋಟ್​​ ದೊರೆತಿದೆ. ನನಗೆ ಬ್ಲಾಕ್​​​​ ಫಂಗಸ್​​ ಲಕ್ಷಣಗಳಿವೆ. ಇದರಿಂದ ಮುಂದೆ ತೊಂದರೆಯಾಗಲಿದೆ. ಪತಿಗೂ ಕೋವಿಡ್ ಲಕ್ಷಣಗಳಿವೆ. ಹೀಗಾಗಿ ನಾನು ಸಾಯಲು ನಿರ್ಧರಿಸಿದ್ದೇವೆ ಎಂದು ಬರೆದಿದ್ದಾರೆ. ರಮೇಶ್ ಕುಮಾರ್ ತನ್ನ ಆಪ್ತರಿಗೆ ಕಳುಹಿಸಿದ ವಾಯ್ಸ್ ಮೆಸೇಜ್​​ಗಳು ಪೊಲೀಸರಿಗೆ ಸಿಕ್ಕಿವೆ. ಇದರಲ್ಲಿ ‘ತನ್ನ ಹೆಂಡತಿ ಕೊರೊನಾದಿಂದ ಗಂಭೀರ ಸ್ಥಿತಿಯಲ್ಲಿದ್ದಾಳೆ. ನಾವಿಬ್ಬರೂ ಸಾಯಲು ನಿರ್ಧರಿಸಿದ್ದೇವೆ. ಹೆಂಡತಿ 40ಕ್ಕೂ ಅಧಿಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದರೂ ಆಗಲಿಲ್ಲ. ಕೊನೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಳ್ಳುವ ಸಂದರ್ಭದಲ್ಲಿಯೂ ಫ್ಯಾನ್​​ನಿಂದ ಬಟ್ಟೆ ತುಂಡಾಗಿ ಆಕೆ ಬಿದ್ದಳು. ಆಕೆ ಇದೀಗ ಸಾವನ್ನಪ್ಪಿದ್ದು ನಾನೂ ಸಾಯುತ್ತಿದ್ದೇನೆ. ‘ನನ್ನ ತಂದೆ ತಾಯಿಯನ್ನು ಜಾಗ್ರತೆಯಿಂದ ನೋಡಿಕೊಳ್ಳಿ. 1 ಲಕ್ಷ ರೂಪಾಯಿ ಇದ್ದು ಅದನ್ನು ಅಂತ್ಯಸಂಸ್ಕಾರಕ್ಕೆ ಬಳಸಿಕೊಳ್ಳಿ. ಮನೆಯಲ್ಲಿರುವ ಸಾಮಗ್ರಿಗಳನ್ನು ಮಾರಿ ಬಡವರಿಗೆ ಹಂಚಿ’ ಎಂದು ತಿಳಿಸಿದ್ದಾರೆ.

Indresh KC

Recent Posts

ಬೃಹತ್ ನಕಲಿ ಸಿಮ್ ಜಾಲ ದಂಧೆ ಬೆಳಕಿಗೆ: ಆನ್ಲೈನ್ ವಂಚಕರಿಗೆ ಮಡಿಕೇರಿಯಿಂದ ಸಿಮ್ ಸಪ್ಲೈ

ಆನ್ ಲೈನ್ ಮೂಲಕ ವಿವಿಧ ರೀತಿಯಲ್ಲಿ ವಂಚಿಸಿ ಲಕ್ಷ ಲಕ್ಷ ಹಣವನ್ನು ದೋಚುತ್ತಿದ್ದ ನಯ ವಂಚಕ ದಂಧೆಕೋರರಿಗೆ ಗ್ರಾಹಕರ ಬದಲಿ…

18 seconds ago

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

4 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

15 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

18 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

19 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

41 mins ago