News Karnataka Kannada
Friday, May 17 2024
ಕರ್ನಾಟಕ

ಭಾಗಮಂಡಲ-ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ

Photo Credit :

ಭಾಗಮಂಡಲ-ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ

ಮಡಿಕೇರಿ: ಕಾವೇರಿಯ ಉಗಮ ಸ್ಥಾನ ತಲಕಾವೇರಿ ಹಾಗೂ ಭಾಗಮಂಡಲ ವ್ಯಾಪ್ತಿಯಲ್ಲಿ ನಿರಂತರವಾಗಿ ಮಳೆ ಸುರಿದ ಪರಿಣಾಮ ಭಾಗಮಂಡಲ- ತಲಕಾವೇರಿ ರಸ್ತೆಯಲ್ಲಿ ಗುಡ್ಡ ಕುಸಿತ ಉಂಟಾಗಿದೆ.

ರಸ್ತೆ ತುಂಬಾ ಮಣ್ಣಿನ ರಾಶಿ ಬಿದ್ದಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿದ್ದು, ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೊಂಡಿದ್ದಾರೆ. ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಮುಂಬರುವ ದಿನಗಳಲ್ಲಿ ಅತಿಯಾದ ಮಳೆಯಾದರೆ ಮತ್ತಷ್ಟು ಅನಾಹುತಗಳು ಸಂಭವಿಸಬಹುದೆನ್ನುವ ಭಯವಿದೆ.

ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಕೇಶ ಮುಂಡನ ಸ್ಥಳ, ನಾಗನ ಕಟ್ಟೆಯ ಮೆಟ್ಟಿಲಿನವರೆಗೆ ನೀರು ಬಂದಿದ್ದು, ಜನರು ನದಿಗೆ ಇಳಿಯದಂತೆ ಬ್ಯಾರಿಕೇಡ್ ಅಳವಡಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು