Categories: ಕರ್ನಾಟಕ

ಭಾರತದಲ್ಲಿ ಹೆಚ್ಚಿನ ಮುಸ್ಲಿಂ ನಾಯಕರು ತಾಲಿಬಾನಿಗಳನ್ನು ಬೆಂಬಲಿಸುತ್ತಿದ್ದಾರೆ ಎಂದು ಆರೋಪಿಸಿದ ತಸ್ಲಿಮಾ ನಸ್ರೀನ್‌

ಬೆಂಗಳೂರು: ದೇಶದಲ್ಲಿ ಹೆಚ್ಚಿನ ಮುಸ್ಲಿಂ ನಾಯಕರು ಅಫ್ಗಾನಿಸ್ತಾನದಲ್ಲಿ ಹಿಡಿತ ಸಾಧಿಸಿರುವ ತಾಲಿಬಾನ್‌ ಅನ್ನು ಬೆಂಬಲಿಸುತ್ತಿದ್ದಾರೆ ಎಂದು ಬಾಂಗ್ಲಾ ಮೂಲದ ಲೇಖಕಿ ತಸ್ಲಿಮಾ ನಸ್ರೀನ್‌ ಅವರು ಟ್ವೀಟ್‌ ಮೂಲಕ ಆರೋಪ ಮಾಡಿದ್ದಾರೆ.
ತಾಲಿಬಾನ್‌ ಅನ್ನು ಬೆಂಬಲಿಸುವವರು ಭಾರತದಲ್ಲಿ ಪ್ರಜಾಪ್ರಭುತ್ವ ಮತ್ತು ಜಾತ್ಯಾತೀತತೆಯನ್ನು ಯಾಕೆ ಬಯಸುತ್ತಾರೆ ಎಂಬದು ಅಚ್ಚರಿಯ ಸಂಗತಿಯಾಗಿದೆ. ಅದೇ ನಾಯಕರು ಮುಸ್ಲಿಂ ರಾಷ್ಟ್ರಗಳಲ್ಲಿ ಥಿಯೋಕ್ರೆಟಿಕ್‌ (ಧರ್ಮ ಮತ್ತು ದೇವರ ಹೆಸರಲ್ಲಿ ನಿಯಮಗಳ ಹೇರಿಕೆ ) ಮತ್ತು ಜಾತ್ಯಾತೀತವಲ್ಲದ ಆಡಳಿತವನ್ನು ಬೆಂಬಲಿಸುತ್ತಾರೆ’ ಎಂದು ತಸ್ಲಿಮಾ ನಸ್ರೀನ್‌ ಕಿಡಿಕಾರಿದ್ದಾರೆ. ‘ಭಾರತದಲ್ಲಿ ದೇವಬಂದಿಗಳು ಉಗ್ರಕೃತ್ಯದಲ್ಲಿ ಭಾಗಿಯಾಗಿಲ್ಲ. ಆದರೆ ಭಾರತದ ಹೊರಗಿನ ಕೆಲವು ಉಗ್ರ ಸಂಘಟನೆಗಳು ದೇವಬಂದಿ ಸಿದ್ಧಾಂತದಿಂದ ಆಕರ್ಷಿತಗೊಂಡಿವೆ’ ಎಂದು ತಸ್ಲಿಮಾ ಟ್ವೀಟ್‌ನಲ್ಲಿ ಹೇಳಿದ್ದಾರೆ. ದೇವಬಂದಿ ಎಂಬುದು ಸುನ್ನಿ ಪಂಥದೊಳಗೆ ಆರಂಭಗೊಂಡ ಇಸ್ಲಾಂ ಪುನಶ್ಚೇತನ ಆಂದೋಲನವಾಗಿದೆ. ಇದು 19ನೇ ಶತಮಾನದಲ್ಲಿ ದಾರುಲ್‌ ಉಲೂಮ್‌ ಇಸ್ಲಾಮಿಕ್‌ ಸೆಮಿನರಿ ಆಧಾರದಲ್ಲಿ ಉತ್ತರ ಪ್ರದೇಶದ ಶಹಾರನ್‌ಪುರದ ದೇವಬಂದ ಎಂಬಲ್ಲಿ ಆರಂಭಗೊಂಡ ಆಂದೋಲನವಾಗಿದೆ. ‘ಸ್ತ್ರೀದ್ವೇಷಿ ತಾಲಿಬಾನಿಯರನ್ನು ಶ್ಲಾಘಿಸುವ ಮೊದಲು ಆಫ್ಗನ್‌ ಮಹಿಳೆಯರ ಸ್ಥಾನದಲ್ಲಿ ನಿಮ್ಮನ್ನು ಊಹಿಸಿಕೊಳ್ಳಿ’ ಎಂದು ತಸ್ಲಿಮಾ ನಸ್ರೀನ್‌ ಮತ್ತೊಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

Indresh KC

Recent Posts

ಸಂಸ್ಕಾರದ ತೊಟ್ಟಿಲು ಸರಸ್ವತಿ ಶಾಲೆ : ಹಿರಿಯ ಶಿಕ್ಷಕಿ

ನಗರದ ಸರಸ್ವತಿ ಶಾಲೆಯ ಹಿರಿಯ ವಿದ್ಯಾರ್ಥಿಗಳ ಸಂಘದಿಂದ ಶನಿವಾರ ಗುರುವಂದನಾ ಹಾಗೂ ಹಳೆಯ ವಿದ್ಯಾರ್ಥಿಗಳ ಸ್ನೇಹ ಮಿಲನ ಕಾರ್ಯಕ್ರಮವನ್ನು ಬಹಳ…

2 mins ago

ತಮಿಳು ನಟ ಸಿಂಭು ಅವರನ್ನು ಚಿತ್ರರಂಗದಿಂದ ನಿಷೇಧಿಸುವಂತೆ ನಿರ್ದೇಶಕ ಒತ್ತಾಯ

ತಮಿಳು ಚಿತ್ರರಂಗದ ಜನಪ್ರಿಯ ನಟ ಸಿಂಭು ಅವರ ವಿರುದ್ಧ ಇದೀಗ ನಿರ್ದೇಶಕ ದೂರು ನೀಡಿದ್ದು ತಮಿಳು ಚಿತ್ರರಂಗದಿಂದ ಹೊರಗಟ್ಟಬೇಕು ಎಂದು…

21 mins ago

ಆಫೀಸ್‌ನಲ್ಲಿ ಒತ್ತಡಕ್ಕೆ ಒಳಗಾಗ್ತಿದ್ದೀರಾ : ಹಾಗಾದ್ರೆ ಇಲ್ಲಿದೆ ಟಿಪ್ಸ್‌

ಹಲವಾರು ಕಾರಣಗಳಿಗಾಗಿ ಕೆಲಸದ ಸ್ಥಳದಲ್ಲಿ ಅತಿಯಾದ ಒತ್ತಡವುಂಟಾಗುತ್ತದೆ. ಇದರಿಂದ ಆಯಾಸ ಹಾಗೂ ವಿಶ್ರಾಂತಿಯ ಕೊರತೆ ತಲೆದೋರುತ್ತದೆ. ಇದರಿಂದ ವ್ಯಕ್ತಿ ಸಿಕ್ಕಾಪಟ್ಟೆ…

45 mins ago

ಇಂದು 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ರಾಜ್ಯದ ಕೆಲವಡೆ ಬಾರಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಹವಮಾನ ಇಲಾಖೆ 8 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, 23 ಜಿಲ್ಲೆಗಳಿಗೆ…

1 hour ago

ಇಂದು ತಾಯಂದಿರ ದಿನ : ಈ ದಿನದ ಮಹತ್ವ ,ಹಿನ್ನೆಲೆ ಏನು?

ತಾಯಂದಿರ ದಿನ , ತಾಯಂದಿರ ಗೌರವಾರ್ಥ ರಜಾದಿನವನ್ನು ವಿಶ್ವದಾದ್ಯಂತ ದೇಶಗಳಲ್ಲಿ ಆಚರಿಸಲಾಗುತ್ತದೆ. ಅದರ ಆಧುನಿಕ ರೂಪದಲ್ಲಿ ರಜಾದಿನವು ಹುಟ್ಟಿಕೊಂಡಿತುಯುನೈಟೆಡ್ ಸ್ಟೇಟ್ಸ್…

1 hour ago

ಇಂದಿನ ರಾಶಿ ಫಲ : ಯಾರಿಗೆ ಶುಭ, ಯಾರಿಗೆ ಅಶುಭ

ವಾರದ ಆರಂಭದಲ್ಲೇ ಶುಭ ಸುದ್ದಿ. ಮನೆಯಲ್ಲಿ ಕಾರ್ಯಕ್ರಮಗಳು ನಡೆಯಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದ್ದು, ವಾರಾಂತ್ಯದಲ್ಲಿ ಎಲ್ಲವೂ ಸರಿದೂಗಲಿದೆ. ಕಾರ್ಮಿಕರಿಗೆ ಲಾಭ.…

2 hours ago