News Karnataka Kannada
Monday, April 29 2024
ಮಂಗಳೂರು

ಮಂಗಳೂರು: ಕರ್ನಾಟಕ ರಾಜ್ಯೋತ್ಸವ, ಸಚಿವ ಎಸ್. ಅಂಗಾರ ಅವರಿಂದ ರಾಷ್ಟ್ರಧ್ವಜಾರೋಣ

Angara
Photo Credit :

ಮಂಗಳೂರು:ಕರ್ನಾಟಕ ರಾಜ್ಯೋತ್ಸವ ಅಂಗವಾಗಿ ನ.೦೧ರ ಸೋಮವಾರ ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಜಿಲ್ಲಾಡಳಿತದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ರಾಷ್ಟಧ್ವಜಾರೋಹಣ ನೆರವೇರಿಸಿ, ಗೌರವ ವಂದನೆ ಸ್ವೀಕರಿಸಿ ಸಂದೇಶ ನೀಡಿದರು.

೬೬ನೇ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ದೇಶದ ತ್ರಿವರ್ಣ ಧ್ವಜಾರೋಹಣ ಮಾಡುವ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ. ರಾಜ್ಯ ಮತ್ತು ಜಿಲ್ಲೆಯಾದ್ಯಂತ ಸುಖಃ, ಶಾಂತಿ, ನೆಮ್ಮದಿ ಮತ್ತು ಸಾಮರಸ್ಯ ನೆಲೆಸಲಿ ಹಾಗೂ ಸಮಸ್ತ ನಾಗರಿಕರು ಶಾಂತಿಯುತ, ಸಹಬಾಳ್ವೆ ನಡೆಸುವಂತಾಗಲಿ ಎಂದು ತಾಯಿ ಭುವನೇಶ್ವರಿ ದೇವಿಯನ್ನು ಪ್ರಾರ್ಥಿಸುತ್ತೇನೆ.

ಕರ್ನಾಟಕದ ಪರಂಪರೆಯು ದೇಶದ ಪುರಾತನ ಪರಂಪರೆಗಳಲ್ಲಿ ಒಂದು. ಕನ್ನಡ ನಾಡು ಕಾವೇರಿಯಿಂದ ಗೋದಾವರಿಯವರೆಗೆ ಪಸರಿಸಿತ್ತು. ವಿಜಯನಗರ ಸಾಮ್ರಾಜ್ಯ ಪತನದ ಬಳಿಕ ವಿವಿಧ ಆಡಳಿತಕ್ಕೆ ಒಳಪಟ್ಟಿದ್ದ ಈ ನಾಡು ಮತ್ತೆ ಒಂದಾಗಬೇಕಾದರೆ ೩೯೧ ವರ್ಷಗಳ ಕಾಲ ಕಾಯಬೇಕಾಯಿತು. ಕರ್ನಾಟಕವೆಂಬುದು ಕೇವಲ ಒಂದು ಭೂ ಪ್ರದೇಶಕ್ಕೆ ಮಾತ್ರ ಸೀಮಿತವಾಗಿಲ್ಲ. ಕರ್ನಾಟಕವೆಂದರೆ ಒಂದು ಸಂಸ್ಕೃತಿ, ಒಂದು ಜನ ಸಮುದಾಯ, ಒಂದು ಜೀವನ ಪದ್ಧತಿ ಎಂಬ ವಿಶಾಲ ಅರ್ಥ ಹೊಂದಿದೆ.

ಬ್ರಿಟಿಷರ ಅಧಿಕಾರದಲ್ಲಿ ಹರಿದು ಹಂಚಿಹೋಗಿದ್ದ ಕರ್ನಾಟಕ ಏಕೀಕರಣದ ಕನಸನ್ನು ಡೆಪ್ಯೂಟಿ ಚೆನ್ನಬಸಪ್ಪ ಅವರು ಕಂಡಿದ್ದರು. ಅವರು ೧೮೬೫ರಲ್ಲಿ ಚಾಲನೆ ನೀಡಿದ ಚಳುವಳಿ ಒಂದುನೂರು ವರ್ಷಗಳವರೆಗೆ ನಿರಂತರ ಹೋರಾಟ ನಡೆಸಿದ ಫಲವಾಗಿ ೧೯೫೬ರ ನವೆಂಬರ್ ೧ ರಂದು ಒಂದುಗೂಡಿದ ವಿಶಾಲ ಮೈಸೂರು ರಾಜ್ಯ ಉದಯವಾಗುದರೊಂದಿಗೆ ವಿವಿಧೆಡೆ ಹಂಚಿಹೋಗಿದ್ದ ಕನ್ನಡಿಗರನ್ನು ಭಾವನಾತ್ಮಕವಾಗಿ ಬೆಸೆಯಲಾಯಿತು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು