ಕರ್ನಾಟಕ

ಮಗು ಹೆಣ್ಣಾಗಿದ್ದಕ್ಕೆ ದೇವಾಲಯದಲ್ಲೇ ಬಿಟ್ಟು ನಡೆದ ಪೋಷಕರು

ಬಳ್ಳಾರಿ: ಹುಟ್ಟಿದ ಮಗು ಹೆಣ್ಣು ಎಂಬ ಕಾರಣಕ್ಕೆ ನವಜಾತ ಶಿಶುವನ್ನು ದೇವಸ್ಥಾನದ ಬಳಿ ಬಿಟ್ಟು ಹೋಗಿರುವ ಘಟನೆ ಜಿಲ್ಲೆಯ ಸಿರಗುಪ್ಪ ತಾಲೂಕಿನ ಬಂಡ್ರಾಳು ಗ್ರಾಮದಲ್ಲಿ ನಡೆದಿದೆ. ಬಂಡ್ರಾಳು ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನದ ಹಿಂಭಾಗದಲ್ಲಿ ಶಿಶುವನ್ನು ಬಿಟ್ಟು ಹೋಗಿದ್ದಾರೆ. ನವಜಾತ ಶಿಶು ಹೆಣ್ಣು ಮಗು ಆದ ಕಾರಣ ದೇವಸ್ಥಾನದ ಬಳಿ ಬಿಟ್ಟು ಹೋಗಿದ್ದಾರೆ ಎಂದು ಹೇಳಲಾಗುತ್ತಿದೆ.
ಸ್ಥಳೀಯರು ದೇವಸ್ಥಾನಕ್ಕೆ ಹೋದಾಗ ಈ ಘಟನೆ ಬೆಳಕಿಗೆ ಬಂದಿದ್ದು, ವಿಷಯ ತಿಳಿದು ಸ್ಥಳಕ್ಕೆ ವೈದ್ಯಾಧಿಕಾರಿ ಡಾ. ವಿದ್ಯಾಶ್ರೀ ಮತ್ತು ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿ ಜಲಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗರ್ಭಾವಸ್ಥೆ ಪೂರ್ಣವಾಗದೆ ಅಕಾಲಿಕವಾಗಿ ಮಗು ಜನಿದ್ದು, ಮಗುವಿನ ತೂಕ ಕಡಿಮೆ ಇದೆ. ಈ ಹಿನ್ನೆಲೆ ವೈದ್ಯರ ಸಲಹೆ ಮೇರೆಗೆ ಮಗುವನ್ನು ಬಳ್ಳಾರಿ ಜಿಲ್ಲಾ ಆಸ್ಪತ್ರೆಗೆ ದಾಖಲು ಮಾಡಿ ಪೋಷಣೆ ಮಾಡಲಾಗುತ್ತಿದೆ.

Indresh KC

Recent Posts

ಸ್ವಾತಿ ಮಲಿವಾಲ್‌ ಮೇಲೆ ದೂರು ದಾಖಲಿಸಿದ ಆರೋಪಿ ಬಿಭವ್‌

ಆಪ್‌ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣದ ಆರೋಪಿಯಾಗಿರುವ ಬಿಭವ್‌ ಕುಮಾರ್‌ ಸಿವಿಲ್ ಲೈನ್ಸ್ ಪೊಲೀಸ್ ಠಾಣೆಗೆ…

2 mins ago

ತಾಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿವ್ಯವಸ್ಥೆ ಪರಿಶೀಲಿಸಿದ ಡಿವೈಎಸ್ಪಿ

ಲೋಕಾಯುಕ್ತದ ಕಲಬುರಗಿ ಡಿವೈಎಸ್ಪಿ ಆಯಂಟನಿ ಜಾನ್ ಹಾಗೂ ಇತರೆ ಅಧಿಕಾರಿಗಳು ಗುರುವಾರ ನಗರದಲ್ಲಿನ ತಾಲ್ಲೂಕು ಆಸ್ಪತ್ರೆಗೆ ದಿಢೀರ್‌ ಭೇಟಿ ನೀಡಿ…

17 mins ago

ಪವಿತ್ರಾ ಜಯರಾಂ ಮೃತಪಟ್ಟ ಬೆನ್ನಲ್ಲೇ ನಟ ಚಂದು ಆತ್ಮಹತ್ಯೆ

ಇತ್ತೀಚೆಗಷ್ಟೇ ತ್ರಿನಯನಿ ಧಾರಾವಾಹಿಯ ನಟಿ ಪವಿತ್ರಾ ಜಯರಾಂ ಅವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಇದರ ಬೆನ್ನಲ್ಲೇ  ತೆಲುಗು ಧಾರಾವಾಹಿ ನಟ…

29 mins ago

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

8 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

9 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

9 hours ago