News Karnataka Kannada
Monday, May 20 2024
ಕರ್ನಾಟಕ

ಮನೆ ಹಸ್ತಾಂತರ ಪ್ರಕ್ರಿಯೆ ತುರ್ತಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಅನೀಸ್ ನಿರ್ದೇಶನ

Photo Credit :

ಮನೆ ಹಸ್ತಾಂತರ ಪ್ರಕ್ರಿಯೆ ತುರ್ತಾಗಿ ಪೂರ್ಣಗೊಳಿಸಿ: ಜಿಲ್ಲಾಧಿಕಾರಿ ಅನೀಸ್ ನಿರ್ದೇಶನ

ಮಡಿಕೇರಿ: ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಸಂಬಂಧಪಟ್ಟ ಅರ್ಹ ಫಲಾನುಭವಿಗಳಿಗೆ ಹಸ್ತಾಂತರ ಮಾಡಲು ಬಾಕಿ ಇರುವ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರಪೇಟೆ ತಾಲೂಕಿನ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಒದಗಿಸಲಾಗುತ್ತಿರುವ ಮೂಲಭೂತ ಸೌಕರ್ಯಗಳ ಬಗ್ಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪ್ರತಿ ಮನೆಗೆ ಪ್ರತ್ಯೇಕ ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ ಹಾಗೂ ಅಗತ್ಯ ಮೂಲ ಸೌಕರ್ಯಗಳನ್ನು ಕಲ್ಪಿಸಿ ಬಾಕಿ ಉಳಿದಿರುವ ಮನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಎಂಜಿನಿಯರ್‍ ಗೆ ಸೂಚಿಸಿದರು.

ಐಟಿಡಿಪಿ ಅಧಿಕಾರಿ ಶಿವಕುಮಾರ್ ಅವರು ಈಗಾಗಲೇ ಬಸವನಹಳ್ಳಿಯಲ್ಲಿ 138 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 34 ಮನೆಗಳ ಕಾಮಗಾರಿ ಬಾಕಿ ಇದೆ. ಹಾಗೆಯೇ ಬ್ಯಾಡಗೊಟ್ಟದಲ್ಲಿ 132 ಮನೆಗಳ ಕಾಮಗಾರಿ ಪೂರ್ಣಗೊಂಡಿದ್ದು, 21 ಮನೆಗಳ ಕಾಮಗಾರಿ ಬಾಕಿ ಇದೆ ಎಂದು ಅವರು ಮಾಹಿತಿ ನೀಡಿದರು.

ಬಾಕಿ ಉಳಿದಿರುವ ಮನೆಗಳ ನಿರ್ಮಾಣ ಕಾಮಗಾರಿ ತಾತ್ಕಾಲಿಕ ಶೆಡ್‍ಗಳನ್ನು ತೆರವುಗೊಳಿಸಿದ ನಂತರ ಪ್ರಾರಂಭಿಸಲಾಗುವುದು ಎಂದು ಐಟಿಡಿಪಿ ಇಲಾಖೆ ಅಧಿಕಾರಿ ಅವರು ತಿಳಿಸಿದರು.

ಬಳಿಕ ಮಾತನಾಡಿದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು, ಅಂತಿಮ ಹಂತದಲ್ಲಿರುವಂತಹ ಕಾಮಗಾರಿಗಳನ್ನು ತುರ್ತಾಗಿ ಒಂದು ವಾರದೊಳಗೆ ಪೂರ್ಣಗೊಳಿಸಬೇಕು ಮತ್ತು ಕೆಆರ್‍ಐಡಿಸಿಎಲ್ ಹಾಗೂ ಗ್ರಾಮೀಣ ಕುಡಿಯುವ ನೀರು ಹಾಗೂ ನೈರ್ಮಲ್ಯೀಕರಣ ಇಲಾಖೆಯ ವ್ಯಾಪ್ತಿಗೆ ಬರುವ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಸವನಹಳ್ಳಿ ಮತ್ತು ಬ್ಯಾಡಗೊಟ್ಟ ಪುನರ್ವಸತಿ ಕೇಂದ್ರಗಳಲ್ಲಿ ಮನೆ ಪಡೆದುಕೊಳ್ಳುತ್ತಿರುವ ಅರ್ಹ ಫಲಾನುಭವಿಗಳಿಗೆ ವಿಶೇಷ ಶಿಬಿರ ಆಯೋಜಿಸಿ ಪಡಿತರ ಚೀಟಿ, ಜಾತಿ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಚುನಾವಣಾ ಗುರುತಿನ ಚೀಟಿ, ಬ್ಯಾಂಕ್ ಖಾತೆ ಹೊಂದುವಂತೆ ಹಾಗೂ ಹಿರಿಯ ನಾಗರಿಕರಿಗೆ ವೃದ್ಧಾಪ್ಯ ವೇತನ ಪತ್ರ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ಕ್ರಮಕೈಗೊಳ್ಳುವಂತೆ ಉಪ ವಿಭಾಗಾಧಿಕಾರಿಗೆ ತಿಳಿಸಿದರು.

ಸಭೆಯಲ್ಲಿ ಉಪ ವಿಭಾಗಾಧಿಕಾರಿ ಜವರೇಗೌಡ, ತಹಶೀಲ್ದಾರ್ ಗೋವಿಂದ ರಾಜು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯೀಕರಣ ಇಲಾಖೆಯ ಕಾರ್ಯಪಾಲಕ ಅಭಿಯಂತರರಾದ ರೇವಣ್ಣರ್, ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕರಾದ ಸಚಿನ್ ಇತರರು ಹಾಜರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು