Categories: ಕರ್ನಾಟಕ

ಮಲೆಮಹದೇಶ್ವರ ಬೆಟ್ಟದಲ್ಲಿ ವಿವಿಧ ಅಭಿವೃದ್ದಿ ಕಾಮಗಾರಿ ಉದ್ಘಾಟಿಸಿದ ಸಿಎಂ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನಲ್ಲಿರುವ ಪವಾಡ ಪುರುಷ ಮಲೆ ಮಹದೇಶ್ವರರು ನೆಲೆಸಿರುವ ಜಿಲ್ಲೆಯ ಮಹದೇಶ್ವರಬೆಟ್ಟದಲ್ಲಿ ಸುಮಾರು 123.77ಕೋಟಿ ರೂ. ವೆಚ್ಚದ ವಿವಿಧ ಅಭಿವೃದ್ದಿ ಯೋಜನೆಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು,  ಶ್ರೀ ಮಲೆಮಹದೇಶ್ವರ ಬೆಟ್ಟದ ಸರ್ವತೋಮುಖ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದ್ದು ಭಕ್ತಾಧಿಗಳ ಅನುಕೂಲಕ್ಕಾಗಿ 109 ಕೋಟಿ ವೆಚ್ಚದಲ್ಲಿ ಅತಿಥಿ ಗೃಹ ನಿರ್ಮಾಣ, ಡಾರ್ಮೆಟರಿ ನಿರ್ಮಾಣ ಸೇರಿದಂತೆ ಸಾಕಷ್ಟು ಅಭಿವೃದ್ಧಿ ಕೆಲಸಗಳಿಗೆ ಚಾಲನೆ ನೀಡಲಾಗಿದೆ. ಶ್ರೀ ಮಹದೇಶ್ವರ ಬೆಟ್ಟದ ಈ ಪುಣ್ಯ ಕ್ಷೇತ್ರದಲ್ಲಿ ಚಾಲನೆ ನೀಡಿದ ಕಾಮಗಾರಿಯನ್ನು ಗುಣಮಟ್ಟದಿಂದ ನಿರ್ವಹಿಸುವಂತೆ ಸೂಚಿಸಿದರಲ್ಲದೆ, ದೇವಸ್ಥಾನದಲ್ಲಿ ನೈರ್ಮಲ್ಯಕ್ಕೆ ಮತ್ತು ಪ್ರಾಧಿಕಾರದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯಸಾನಿಧ್ಯ ವಹಿಸಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು 720 ಜನರು ತಂಗುವ ಡಾರ್ಮೇಟರಿ ಕಟ್ಟಡ, ಅಂತರಗಂಗೆ ಸಮೀಪ ಶುದ್ಧ ನೀರಿನ ಕಲ್ಯಾಣಿಯ ಉದ್ಘಾಟನೆ, ವಾಣಿಜ್ಯ ಸಂಕೀರ್ಣ ಕಟ್ಟಡದ ಪಕ್ಕದಲ್ಲಿ ಆಧುನಿಕ ಸುಸಜ್ಜಿತ ಉಪಹಾರ ಮಂದಿರದ ಉದ್ಘಾಟನೆ, ಹಾಲಿ ಇರುವ ವಾಣಿಜ್ಯ ಸಂಕೀರ್ಣದಲ್ಲಿ ಮಾಹಿತಿ ಕೇಂದ್ರ ಕಟ್ಟಡದ ಉದ್ಘಾಟನೆ, ರಾಜಗೋಪುರದ ಮುಂಭಾಗದಲ್ಲಿರುವ ಕಾಬಲ್ ನೆಲಹಾಸು ಆವರಣದ ಕೆಳಭಾಗದಲ್ಲಿ 65 ಶೌಚಾಲಯಗಳ ಕಟ್ಟಡ ಉದ್ಘಾಟನೆ, ಆಡಳಿತ ಕಚೇರಿಯ ಮುಂಭಾಗದ ಪಾರ್ಕಿಂಗ್ ಯಾರ್ಡ್ ಹತ್ತಿರ ಶೌಚಾಲಯ ಕಟ್ಟಡ ಉದ್ಘಾಟನೆ, ದೇವಸ್ಥಾನದ ಒಳ ಪ್ರಾಂಗಣದಲ್ಲಿರುವ ಕೊಠಡಿಯನ್ನು ನವೀಕರಿಸುವ ಕಾಮಗಾರಿ, ನಾಗಮಲೆ ಭವನದಲ್ಲಿರುವ ಕೊಠಡಿಯನ್ನು ವೀಡಿಯೋ ಕಾನ್ಪರೇನ್ಸ್ ಹಾಲ್ ಆಗಿ ಮಾರ್ಪಡಿಸುವ ಕಾಮಗಾರಿಗಳನ್ನು ಉದ್ಘಾಟಿಸಿದರು.

ಇನ್ನು ಮಾಸ್ಟರ್ ಪ್ಲಾನ್ ಆವರಣದಲ್ಲಿ 512 ಕೊಠಡಿಗಳ (ಎರಡನೇ ಹಂತದಲ್ಲಿ 416 ಕೊಠಡಿಗಳು) ಅತಿಥಿ ಗೃಹ ನಿರ್ಮಾಣ ಕಾಮಗಾರಿ, ದೇವಸ್ಥಾನದ ಹಿಂಭಾಗದಲ್ಲಿ ಸರತಿ ಸಾಲಿನ ಸಂಕೀರ್ಣ ನಿರ್ಮಾಣ ಕಾಮಗಾರಿ, ತಾಳಬೆಟ್ಟದಿಂದ ಮಲೆಮಹದೇಶ್ವರ ಸ್ವಾಮಿ ದೇವಾಸ್ಥಾನದವರೆಗೆ ಕಾಲ್ನಡಿಗೆ ಮಾರ್ಗದಲ್ಲಿ ಗ್ರಾನೈಟ್ ಮೆಟ್ಟಿಲು ನಿರ್ಮಾಣ ಹಾಗೂ ಇತರೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ 30ಜನರು ತಂಗುವ ಟಾರ್ಮೆಂಟರಿ ಕಟ್ಟಡ ಕಾಮಗಾರಿ(ಎರಡನೇ ಹಂತ), ಮಾಸ್ಟರ್ ಪ್ಲಾನ್ ಆವರಣದಲ್ಲಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ, ಪ್ರಾಧಿಕಾರದ ದಾಸೋಹ ಭವನದಿಂದ ಶಾಶ್ವತ ಹೆಲಿಪ್ಯಾಡ್ ವರೆಗೆ ರಸ್ತೆಯನ್ನು ಅಭಿವೃದ್ಧಿಪಡಿಸುವುದು, ಮಹದೇಶ್ವರ ಬೆಟ್ಟದ ಕತ್ತಿ ಪವಾಡದಿಂದ ತಂಬಡಿಗೆರೆ ಮುಖಾಂತರ ಎಸ್ಬಿಎಂ ವೃತ್ತದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ ಪೆÇಲೀಸ್ ವಸತಿ ಗೃಹಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಕಾಮಗಾರಿ, ಮಾಸ್ಟರ್ ಪ್ಲಾನ್ ಆವರಣದಲ್ಲಿ ಹೆಚ್ಚುವರಿ ಲಾಡು ತಯಾರಿಸುವ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಿದರು.

Desk

Recent Posts

ಅನೈತಿಕ ಸಂಬಂಧ ಶಂಕೆ: ಬೀದರ್​​ನಲ್ಲಿ ಯುವಕರಿಂದ ನೈತಿಕ ಪೊಲೀಸ್​ ಗಿರಿ

ಹಿಂದೂ ಯುವಕನ ಜೊತೆ ಮುಸ್ಲಿಂ ಸಮುದಾಯದ ಮಹಿಳೆ ಕುಳಿತಿದಕ್ಕೆ ಅದೇ ಕೋಮಿನ ಯುವಕರ ಗುಂಪೊಂದು ಹಲ್ಲೆ ನಡೆಸಿ, ನೈತಿಕ ಪೊಲೀಸ್​​…

5 hours ago

ಸಂಗೊಳ್ಳಿರಾಯಣ್ಣ ಪ್ರತಿಮೆ ಭಗ್ನಗೊಳಿಸಿದ ಆರೋಪಿ ಸೆರೆ

ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಬೀಕನಹಳ್ಳಿ ಗ್ರಾಮದಲ್ಲಿ ಕಳೆದ ಮೂರು ದಿನಗಳ ಹಿಂದೆ  ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿರಾಯಣ್ಣ ಪ್ರತಿಮೆಯನ್ನು ಭಗ್ನಗೊಳಿಸಿದ್ದ ಆರೋಪಿಯನ್ನು…

5 hours ago

ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಿಗೆ ಹುಸಿ ಬಾಂಬ್ ಬೆದರಿಕೆ

ಸಿಲಿಕಾನ್ ಸಿಟಿಯಲ್ಲಿ ಹುಸಿ ಬಾಂಬ್ ಬೆದರಿಕೆ ಮೇಲ್ ಮುಂದುವರೆದಿದ್ದು, ನಗರದ ಪ್ರತಿಷ್ಠಿತ ಆರು ಆಸ್ಪತ್ರೆಗಳಾದ ನಾಗವಾರದ ಸೇಂಟ್ ಫಿಲೋಮಿನಾ ಸೇರಿದಂತೆ…

5 hours ago

ಬೀದರ್‌: ಜಿಲ್ಲೆಯಾದ್ಯಂತ ತಂಪೆರೆದ ಮಳೆ, ಸಿಡಿಲಿಗೆ ವ್ಯಕ್ತಿ ಸಾವು

ಜಿಲ್ಲೆಯಾದ್ಯಂತ ಭಾನುವಾರ ಗುಡುಗು, ಸಿಡಿಲು ಸಹಿತ ಮಳೆಯಾಗಿದ್ದು, ವಾತಾವರಣ ತಂಪಾಗಿದೆ.

5 hours ago

ಆಮ್ ಆದ್ಮಿ ಪಕ್ಷವನ್ನು ಚುನಾವಣೆಯಲ್ಲಿ ಆಯ್ಕೆ ಮಾಡಿದರೆ ನಾನು ಮತ್ತೆ ಜೈಲಿಗೆ ಹೋಗಬೇಕಾಗಿಲ್ಲ

ಮಧ್ಯಂತರ ಜಾಮೀನಿನ ಮೇಲೆ ಜೈಲಿನಿಂದ ಹೊರಬಂದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೆಹಲಿಯ ಮೋತಿ ನಗರ ಪ್ರದೇಶದಲ್ಲಿ ಚುನಾವಣಾ…

7 hours ago

ಗೌಡರ ಕುಟುಂಬಕ್ಕೆ ಮೋಸ ಮಾಡುವುದಿಲ್ಲ: ಕೆ.ಮಂಜು

ರಾಜಕೀಯ ಕೊನೆಗಾಲದಲ್ಲಿ ನನ್ನ ಕೈ ಹಿಡಿದವರು ಎಚ್.ಡಿ.ದೇವೇಗೌಡರು, ಅವರ ಕುಟುಂಬಕ್ಕೆ ದ್ರೋಹ ಮಾಡುವ ಕೆಲಸ ಮಾಡುವುದಿಲ್ಲ ಎಂದು ಶಾಸಕ ಎ.…

7 hours ago