News Karnataka Kannada
Monday, April 29 2024
ಕರ್ನಾಟಕ

ಮಳೆ ಹಾನಿ– ಇಂದು ಕೇಂದ್ರ ಅಧ್ಯಯನ ತಂಡ ರಾಜ್ಯಕ್ಕೆ: ಸಚಿವ ಅಶೋಕ

Rain Damage 19 6 21 Dt196219 Newsk 2068095139
Photo Credit :

ಬೆಂಗಳೂರು: ಮಳೆ ಮತ್ತು ಪ್ರವಾಹದಿಂದ ಆಗಿರುವ ಹಾನಿ ಕುರಿತು ಅಧ್ಯಯನ ನಡೆಸಲು ಕೇಂದ್ರದ ಅಧಿಕಾರಿಗಳ ತಂಡ ಶನಿವಾರ ಬೆಂಗಳೂರಿಗೆ ಬರಲಿದೆ. ಮಂಗಳವಾರದವರೆಗೂ ಈ ತಂಡ ವಿವಿಧೆಡೆ ಪ್ರವಾಸ ಮಾಡಿ, ಅಧ್ಯಯನ ನಡೆಸಲಿದೆ ಎಂದು ಕಂದಾಯ ಸಚಿವ ಆರ್‌. ಅಶೋಕ ತಿಳಿಸಿದರು.

ಅತಿವೃಷ್ಟಿ ಹಾಗೂ ಪ್ರವಾಹದಿಂದ ₹ 5,690 ಕೋಟಿ ನಷ್ಟವಾಗಿದೆ ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಕೇಂದ್ರೀಯ ವಿಪತ್ತು ಪರಿಹಾರ ನಿಧಿಯಿಂದ ರಾಜ್ಯಕ್ಕೆ ₹ 765 ಕೋಟಿ ಪರಿಹಾರ ದೊರೆಯಬೇಕಿದೆ. ಅಧಿಕಾರಿಗಳ ತಂಡ ವರದಿ ಸಲ್ಲಿಸಿದ ಬಳಿಕ ಈ ಮೊತ್ತ ಬಿಡುಗಡೆಯಾಗಲಿದೆ ಎಂದರು.

ಭೂಮಾಪಕರ ನೇಮಕ: ರಾಜ್ಯದಲ್ಲಿ ಭೂಮಾಪನಕ್ಕೆ ಸಂಬಂಧಿಸಿದ ಎರಡು ಲಕ್ಷ ಕಡತಗಳು ಬಾಕಿ ಇವೆ. ಅವುಗಳ ತ್ವರಿತ ವಿಲೇವಾರಿಗಾಗಿ 820 ಭೂಮಾಪಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಡಿಸೆಂಬರ್‌ ಅಂತ್ಯದೊಳಗೆ ಇನ್ನೂ 600 ಭೂಮಾಪಕ ರನ್ನು ನೇಮಕ ಮಾಡಲಾಗುವುದು ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು