ಬೆಂಗಳೂರು : ಬಂಗಾಳಕೊಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ವರದಿ ತಿಳಿಸಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮುಂದಿನ ಮೂರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.