ಬೆಂಗಳೂರು : ಮುಂದಿನ ವಾರದಿಂದ ಮಕ್ಕಳಿಗೆ ಕೊರೊನಾ ಲಸಿಕೆ ನೀಡುವ ಸಾಧ್ಯತೆ ಇದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್ ಅವರು, ಝೈಡಸ್ ಕ್ಯಾಡಿಲಾ ಕಂಪನಿಯು ಅಭಿವೃದ್ಧಿಪಡಿಸಿರುವ ಝೈಕೋವ್ ಡಿ ಲಸಿಕೆಗೆ ಬೇಡಿಕೆ ಹೆಚ್ಚಿದೆ.
ಒಂದು ಕೋಟಿ ಡೋಸ್ ಲಸಿಕೆ ಖರೀದಿಗೆ ತೀರ್ಮಾನಿಸಲಾಗಿದ್ದು,ಕೇಂದ್ರ ಸರ್ಕಾರದಿಂದ ಲಸಿಕೆ ಪೂರೈಕೆಯಾಗುತ್ತಲೇ ರಾಜ್ಯಾದ್ಯಂತ ಹಂಚಿಕೆ ಮಾಡಲಾಗುವುದು ಎಂದು ಹೇಳಿದ್ದಾರೆ.
ರಾಜ್ಯದಲ್ಲಿ ಶೇ. 89 ರಷ್ಟು ಜನರಿಗೆ ಕೊರೊನಾ ಮೊದಲ ಡೋಸ್ ನೀಡಲಾಗಿದೆ. ಶೇ. 48 ರಷ್ಟು ಜನರಿಗೆ 2 ನೇ ಡೋಸ್ ನೀಡಲಾಗಿದೆ ಎಂದು ಹೇಳಿದ್ದಾರೆ.