Categories: ಕರ್ನಾಟಕ

ಮುಂದಿನ ವಾರ ಸಚಿವ ಆನಂದ್‌ ಸಿಂಗ್‌ ರನ್ನು ದೆಹಲಿಗೆ ಕರೆದೊಯ್ಯಲಿರುವ ಮುಖ್ಯ ಮಂತ್ರಿ ಬೊಮ್ಮಾಯಿ

ಬೆಂಗಳೂರು, – ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿರುವ ಸಚಿವ ಆನಂದ್ ಸಿಂಗ್ ಅವರನ್ನು ಖುದ್ದಾಗಿ ಹೈಕಮಾಂಡ್ ನಾಯಕರ ಭೇಟಿ ಮಾಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಂದಿನ ವಾರ ತಮ್ಮೊಂದಿಗೆ ಅವರನ್ನೂ ದೆಹಲಿಗೆ ಕರೆದೊಯ್ಯಲು ತೀರ್ಮಾಸಿದ್ದಾರೆ.
ಸಚಿವ ಆರ್ ಅಶೋಕ್ ನಿವಾಸದಲ್ಲಿ ನಡೆದ ಸಂಧಾನ ಸಭೆ ಮೂಲಕ ಸಚಿವ ಆನಂದ್ ಸಿಂಗ್ ಅಸಮಾಧಾನ ಶಮನವಾದಂತಾಗಿದೆ. ಸಭೆಯಲ್ಲಿ ಹೈಕಮಾಂಡ್ ಮಟ್ಟದಲ್ಲಿ ಚರ್ಚಿಸುವ ನಿರ್ಣಯ ಕೈಗೊಳ್ಳಲಾಗಿದೆ. ಅದರಂತೆ ಆ.15ರ ನಂತರ ಸಿಎಂ ಬಸವರಾಜ ಬೊಮ್ಮಾಯಿ ನವದೆಹಲಿಗೆ ತೆರಳುತ್ತಿದ್ದು, ತಮ್ಮ ಜೊತೆಯಲ್ಲಿ ಆನಂದ್ ಸಿಂಗ್ ಅವರನ್ನೂ ಕರೆದೊಯ್ದು, ವರಿಷ್ಠರನ್ನು ಭೇಟಿ ಮಾಡಿಸಿ ಮಾತುಕತೆ ನಡೆಸಲಿದ್ದಾರೆ.ಆನಂದ್ ಸಿಂಗ್ ಖಾತೆ ಬದಲಾವಣೆ ಕುರಿತು ಇಟ್ಟಿರುವ ಬೇಡಿಕೆ ಕುರಿತು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೈಕಮಾಂಡ್ ನೀಡುವ ನಿರ್ಧಾರ, ಸಲಹೆ-ಸೂಚನೆಗಳ ವಿಚಾರದಲ್ಲಿ ಆನಂದ್ ಸಿಂಗ್ ಅವರಿಗೆ ಯಾವುದೇ ಗೊಂದಲ ಆಗಬಾರದು ಎಂಬ ಕಾರಣಕ್ಕೆ ಅವರನ್ನೇ ಕರೆದೊಯ್ದು ಅವರ ಸಮ್ಮುಖದಲ್ಲಿ ಈ ವಿಚಾರದಲ್ಲಿ ಚರ್ಚೆ ನಡೆಸಲು ಸಿಎಂ ನಿರ್ಧರಿಸಿದ್ದಾರೆ.
ಆ.15ರ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಮುಗಿಸಿದ ನಂತರ ಹೈಕಮಾಂಡ್ ನಾಯಕರ ಭೇಟಿಗೆ ದಿನಾಂಕ ನಿಗದಿಪಡಿಸಿಕೊಂಡು ಮುಖ್ಯಮಂತ್ರಿಗಳು ಆನಂದ್ ಸಿಂಗ್ ಜೊತೆ ದೆಹಲಿಗೆ ತೆರಳಲಿದ್ದಾರೆ.

 

Indresh KC

Recent Posts

ಮಹಿಳೆಯ ಎಳೆದೊಯ್ದು ಕಾರು ಪಾರ್ಕಿಂಗ್‌ನಲ್ಲಿ ಅತ್ಯಾಚಾರ; ಭೀಕರ ದೃಶ್ಯ ಸೆರೆ

ಮಹಿಳೆ ಮೇಲೆ ಹಿಂಬದಿಯಿಂದ ಬೆಲ್ಟ್ ಮೂಲಕ ದಾಳಿ ನಡೆಸಿ, ಆಕೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ ಭೀಕರ ಘಟನೆ ನ್ಯೂಯಾರ್ಕ್ ನಗರದಲ್ಲಿ…

3 mins ago

ಮಲತಂದೆಯಿಂದಲೇ ಬಾಲಿವುಡ್ ನಟಿ ಕೊಲೆ; ಕೋರ್ಟ್

ಬಾಲಿವುಡ್ ನಟಿ ಲೈಲಾ ಖಾನ್ ಹತ್ಯೆ ಪ್ರಕರಣದಲ್ಲಿ ಮಲತಂದೆ ಪರ್ವೀನ್ ತಾಕ್ ದೋಷಿ ಎಂದು ಮುಂಬೈ ಸೆಷನ್ ಕೋರ್ಟ್ ಘಟನೆ…

14 mins ago

ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಮೈಕ್ರೊಚಿಪ್‌ ಅಳವಡಿಕೆ ಕಡ್ಡಾಯ

ಅನ್ಯ ದೇಶಗಳಿಂದ ಅಮೆರಿಕಕ್ಕೆ ಕೊಂಡೊಯ್ಯುವ ಶ್ವಾನಗಳಿಗೆ ಕನಿಷ್ಠ 6 ತಿಂಗಳಾಗಿರಬೇಕು ಮತ್ತು ರೇಬಿಸ್‌ ತಡೆಗಟ್ಟುವ ಲಸಿಕೆ ಹಾಕಿಸಿರುವ ಮಾಹಿತಿ ಇರುವ…

17 mins ago

ಶಾರ್ಟ್ ಸರ್ಕ್ಯೂಟ್​ನಿಂದ ಸಿನಿಮಾ ಶೂಟಿಂಗ್ ಸೆಟ್​ ನಲ್ಲಿ ಬೆಂಕಿ: ನಾಲ್ಕು ಕೋಟಿ ನಷ್ಟ

ಲುಗು  ಜನಪ್ರಿಯ ನಟ ನಂದಮೂರಿ ಕಲ್ಯಾಣ್ ರಾಮ್  ನಟಿಸುತ್ತಿರುವ ಹೊಸ ಸಿನಿಮಾದ ಚಿತ್ರೀಕರಣ ನಡೆಸಲಾಗುತ್ತಿದ್ದ ಸೆಟ್​ಗೆ ಶಾರ್ಟ್ ಸರ್ಕ್ಯೂಟ್​ನಿಂದಾಗಿ ಬೆಂಕಿ…

18 mins ago

ಅರವಿಂದ್ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

ಏಳು ಹಂತದ ಲೋಕಸಭೆ ಚುನಾವಣೆಯ ಅಂತಿಮ ಹಂತದ ಮತದಾನವಾದ ಜೂನ್ 1ರವರೆಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ…

40 mins ago

ಚಾಮರಾಜನಗರದಲ್ಲಿ ಉಡ ಸಾಗಿಸುತ್ತಿದ್ದ ವ್ಯಕ್ತಿಯ ಬಂಧನ

ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳನ್ನು ಜೀವಂತವಾಗಿ ಸೆರೆ ಹಿಡಿದು ಸಾಗಾಟ ಮಾಡುವ ಜಾಲ ಕಾರ್ಯಾಚರಿಸುತ್ತಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣಿಗಳನ್ನು ಬೇಟೆಯಾಡಿ ಮಾಂಸ…

52 mins ago