News Karnataka Kannada
Saturday, May 04 2024
ಕರ್ನಾಟಕ

ಮುಂದಿನ 3 ದಿನ ಭಾರಿ ಮಳೆ ಸಾಧ್ಯತೆ : ಕೊಡಗು, ಉಡುಪಿ, ಚಿಕ್ಕಮಗಳೂರಿನಲ್ಲಿ ಯೆಲ್ಲೊ ಅಲರ್ಟ್

Heavy Rain 15 7 21
Photo Credit :

ಬೆಂಗಳೂರು, ;ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕಾಗಿದ್ದು, ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ. ಹವಾ ಮುನ್ಸೂಚನೆ ಪ್ರಕಾರ ಮುಂದಿನ ಮೂರು ದಿನಗಳ ಕಾಲ ಉತ್ತಮ ಮಳೆಯಾಗಲಿದೆ. ಕೋಲಾರ,ಬೆಂಗಳೂರು ಗ್ರಾಮಾಂತರ, ಮಲೆನಾಡಿನ ಕೆಲವು ಭಾಗಗಳಲ್ಲಿ ಮಾತ್ರ ಹೆಚ್ಚಿನ ಪ್ರಮಾಣದ ಮಳೆಯಾಗಿದೆ. ಉಳಿದಂತೆ ಚದುರಿದಂತೆ ಹಗರದಿಂದ ಸಾಧಾರಣ ಮಳೆಯಾಗಿದೆ.
ಹವಾ ಮುನ್ಸೂಚನೆ ಪ್ರಕಾರ ಉಡುಪಿ, ದಕ್ಷಿಣ ಕನ್ನಡ, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಕೊಡುಗು, ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.ಈ ಜಿಲ್ಲೆಗಳಲ್ಲಿ ನಾಳೆಯವರೆಗೆ ಹವಾಮಾನ ಇಲಾಖೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಿದೆ. ಆ.29-30ರವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಿರುವುದಾಗಿ ಬೆಂಗಳೂರಿನ ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.ಉತ್ತರ ಕರ್ನಾಟಕ ಭಾಗದಲ್ಲಿ ಮುಂದಿನ ಮೂರು ದಿನಗಳ ಕಾಲ ಚದುರಿದಂತೆ ಸಾಧಾರಣ ಮಳೆಯಾದರೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಕಡೆಗಳಲ್ಲಿ ವ್ಯಾಪಕ ಪ್ರಮಾಣದ ಮಳೆಯಾಗುವ ಲಕ್ಷಣಗಳು ಗೋಚರಿಸುತ್ತಿವೆ ಎಂದಿದ್ದಾರೆ. ಅರಬ್ಬಿ ಸಮುದ್ರದ ಕರ್ನಾಟಕ, ಕೇರಳ ಭಾಗದಲ್ಲಿ ಕಡಿಮೆ ಒತ್ತಡವಿರುವ ವಿಸ್ತರಿಸಿರುವ ಪ್ರದೇಶ ಉಂಟಾಗಿರುವ ಹಿನ್ನೆಲೆಯಲ್ಲಿ ಮೋಡ ಕವಿದ ವಾತಾವರಣ ಕಂಡುಬರುತ್ತಿದ್ದು, ಸಂಜೆ ಹಾಗೂ ರಾತ್ರಿ ವೇಳೆ ಮಳೆಯಾಗುತ್ತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3.7 / 5. Vote count: 3

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು