ಬೆಂಗಳೂರು: ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಖಾತೆ ಕ್ಯಾತೆಗೆ ಕೊನೆಗೂ ಫುಲ್ಸ್ಟಾಪ್ ಬಿದ್ದಿದೆ. ಬುಧವಾರ ಸಂಜೆ ಸಚಿವ ಆನಂದ್ ಸಿಂಗ್ ಜೊತೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದೆ. ಈ ಸಂಬಂಧ ಮಾತನಾಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಆನಂದ್ ಸಿಂಗ್ ಖಾತೆ ಬದಲಾವಣೆ ಕೇಳಿದ್ದಾರೆ. ಹೈಕಮಾಂಡ್ ಜೊತೆ ಮಾತುಕತೆ ನಡೆಸಿ ನಂತರ ನಿರ್ಧಾರ ಮಾಡುತ್ತೇನೆ ಎಂದು ಅವರಿಗೆ ಹೇಳಿದ್ದೇನೆ ಅಂತ ಸಂಧಾನ ಸಭೆಯ ಮಾಹಿತಿ ನೀಡಿದರು.
ಆನಂದ್ ಸಿಂಗ್ ರಾಜೀನಾಮೆ ನೀಡುವುದಿಲ್ಲ , ಆಗಸ್ಟ್ 15 ರಂದು ಬಳ್ಳಾರಿಯಲ್ಲಿ ದ್ವಜಾರೋಹಣ ಮಾಡಲಿದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಮುಖ್ಯ ಮಂತ್ರಿಗಳ ಜತೆ ಸಭೆ ; ಸಚಿವ ಆನಂದ್ ಸಿಂಗ್ ಖಾತೆ ಕ್ಯಾತೆ ಸುಖಾಂತ್ಯ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.