Categories: ಕರ್ನಾಟಕ

ಮೇಕೆ ದಾಟು ವಿಷಯದಲ್ಲಿ ಇನ್ನಷ್ಟು ಬಿಗಿಯಾದ ತಮಿಳುನಾಡು

ಚೆನ್ನೈ ; ಕರ್ನಾಟಕ ಸರ್ಕಾರ ಕೈಗೆತ್ತಿಕೊಂಡಿರುವ ಮೇಕೆದಾಟು ಯೋಜನೆಯ ವಿರುದ್ದ ಕೇಂದ್ರ ಸರ್ಕಾರದ ಮೇಲೆ ಮತ್ತಷ್ಟು ಒತ್ತಡ ಹೇರಲು ಇಂದು ತಮಿಳುನಾಡು ಸರ್ಕಾರ ಅಲ್ಲಿನ ಸರ್ವ ಪಕ್ಷಗಳ ಸಭೆ ಕರೆದಿದ್ದು, ಈ ಸಭೆಯಲ್ಲಿ 3 ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ.
ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದಲ್ಲಿ ನಡೆದ ಇಂದಿನ ತಮಿಳುನಾಡು ಸರ್ವಪಕ್ಷಗಳ ಸಭೆಯಲ್ಲಿ ಮೇಕೆದಾಟು ಯೋಜನೆಗೆ ತೀವ್ರ ವಿರೋಧ ವ್ಯಕ್ತಪಡಿಸಲಾಯಿತು. ಡಿಎಂಕೆ, ಎಐಎಡಿಎಂಕೆ, ಕಾಂಗ್ರೆಸ್, ಬಿಜೆಪಿ, ಎಡಪಕ್ಷಗಳು ಸೇರಿ ಒಟ್ಟು 13 ಪಕ್ಷಗಳಿಂದ ವಿರೋಧ ವ್ಯಕ್ತವಾಗಿದ್ದು, ಕಾನೂನು ಹೋರಾಟದ ಬಗ್ಗೆಯೂ ಸಮಾಲೋಚನೆ ನಡೆದಿದೆ. ಅಲ್ಲದೆ, ಸುಪ್ರೀಂಕೋರ್ಟ್ ಮೆಟ್ಟಿಲೇರಲು ತ.ನಾಡು ಸರ್ಕಾರದ ಚಿಂತನೆ ನಡೆಸಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ.
1 ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸುವುದು.2 ಸರ್ವ ಪಕ್ಷ ಸದಸ್ಯರು ಕೇಂದ್ರ ಜಲ ಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಭೇಟಿಯಾಗಿ ಅವರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವುದು.3 ಇದೇ ಸಂಧರ್ಭದಲ್ಲಿ ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸುವುದು.
ಇದೇ ಜುಲೈ 7ರಂದು ತಮಿಳುನಾಡಿನ ಜಲ ಸಂಪನ್ಮೂಲ ಸಚಿವ ದೊರೈ ಮುರುಗನ್ ಅವರು ಕೇಂದ್ರ ಜಲಸಂಪನ್ಮೂಲ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಭೇಟಿ ಮಾಡಿ ಮೇಕೆದಾಟು ಯೋಜನೆಯನ್ನು ತಡೆಯುವಂತೆ ಮನವಿ ಸಲ್ಲಿಸಿದ್ದರು. ಭೇಟಿ ವೇಳೆ “ಯೋಜನೆ ಬಗೆಗಿನ ವ್ಯಾಜ್ಯ ಸುಪ್ರೀಂ ಕೋರ್ಟಿನಲ್ಲಿ ವಿಚಾರಣೆ ನಡೆಯುತ್ತಿದೆ. ಸುಪ್ರೀಂ ಕೋರ್ಟ್ ತೀರ್ಪು ನೀಡುವರೆಗೆ ಯೋಜನೆಗೆ ಅನುಮತಿ ಕೊಡಬೇಡಿ. ಕರ್ನಾಟಕ ತರಾತುರಿಯಲ್ಲಿ ಯೋಜನೆ ಆರಂಭಿಸುತ್ತಿದೆ. ಈ ಯೋಜನೆ ಆರಂಭವಾದರೆ ಎರಡೂ ರಾಜ್ಯಗಳ ಗಡಿಯಲ್ಲಿ ಮತ್ತೆ ಸಮಸ್ಯೆ ಉಲ್ಬಣವಾಗುತ್ತದೆ. ತಮಿಳುನಾಡಿನ ರೈತರಿಗೆ ಅನ್ಯಾಯವಾಗಲಿದೆ” ಎಂದು ದೂರು ನೀಡಿದ್ದರು.ಅಸಲಿಗೆ ಅಂತರ ರಾಜ್ಯ ಜಲ ವಿವಾದಗಳು ನ್ಯಾಯಾಲಯ ಮತ್ತು ನ್ಯಾಯಾಧೀಕರಣಗಳು ಹೇಳಿದಾಗಲೂ ಮಾತುಕತೆ ಮೂಲಕ ಬಗೆಹರಿದ ಉದಾಹರಣೆಗಳಿಲ್ಲ. ಅದರಲ್ಲೂ ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಶತಕಗಳಿಂದಲೂ ನಡೆದುಕೊಂಡು ಬರುತ್ತಿರುವ ಕಾವೇರಿ ಜಲ ವಿವಾದ ಅತ್ಯಂತ ಸೂಕ್ಷ್ಮವಾದುದಾಗಿದೆ. ರಾಜಕೀಯ ಕಾರಣಗಳಿಗೆ ಮಾತ್ರವಲ್ಲದೆ ಜನ ಸಮಾನ್ಯರು ಕೂಡ ಭಾವನಾತ್ಮಕವಾಗಿ ಬೆಸೆದುಕೊಂಡಿರುವ ಸಂಗತಿಯಾಗಿದೆ.
ಆದರೆ, ಈ ವಿಚಾರವನ್ನು ಸೂಕ್ಷ್ಮವಾಗಿ ಗಮನಿಸದೆ ಮುಖ್ಯಮಂತ್ರಿ ಯಡಿಯೂರಪ್ಪ ತಮಿಳುನಾಡಿನ ನೂತನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದು ಮೇಕೆದಾಟು ಯೋಜನೆಯನ್ನು ಉಲ್ಲೇಖಿಸಿ ಯಡವಟ್ಟು ಮಾಡಿಕೊಂಡಿದ್ದಾರೆ. ಪರಿಣಾಮ ಮೇಕೆದಾಟು ಯೋಜನೆಯನ್ನು ಶತಾಯಗತಾಯ ತಡೆಯಬೇಕೆಂದು ತಮಿಳುನಾಡು ಯತ್ನಿಸುತ್ತಿದೆ. ಯಡಿಯೂರಪ್ಪ ಬರೆದ ಪತ್ರದಿಂದ ಕರ್ನಾಟಕ ರಾಜ್ಯಕ್ಕೆ ಕಾವೇರಿ ನೀರಿನ ವಿಚಾರದಲ್ಲಿ ಹಿನ್ನಡೆಯಾಗುವ ಸಾಧ್ಯತೆಗಳು ದಟ್ಟವಾಗುತ್ತಿದೆ.

Indresh KC

Recent Posts

ದೆಹಲಿಯಲ್ಲಿ ಬಿರುಗಾಳಿ: ಇಬ್ಬರು ಮೃತ್ಯು, 23 ಮಂದಿಗೆ ಗಾಯ

ಬಿರುಗಾಳಿಗೆ ಇಬ್ಬರು ಸಾವನ್ನಪ್ಪಿದ್ದು, 23 ಮಂದಿ ಗಾಯಗೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ.

44 seconds ago

ಹೆಚ್ಚಿನ ಫೀಸ್ ತೆಗೆದುಕೊಂಡರೆ ಖಾಸಗಿ ಶಾಲೆಗಳ ವಿರುದ್ಧ ಕ್ರಮ : ಬಂಗಾರಪ್ಪ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಪೋಷಕರು ತಮ್ಮ ಮಕ್ಕಳಿಗೆ ಮುಂದಿನ ವಿದ್ಯಾಭ್ಯಸದ ಬಗ್ಗೆ ಈಗಾಗಲೇ ಯೋಚಿಸುತ್ತಿದ್ದಾರೆ

9 mins ago

ವಿದ್ಯಾರ್ಥಿನಿಯ ಹತ್ಯೆ ಪ್ರಕರಣ: ಮರದ ಮೇಲೆ ಬಾಲಕಿಯ ರುಂಡ ಪತ್ತೆ

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿನಿಯ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆಗೂ ಬಾಲಕಿ ರುಂಡ ಪತ್ತೆಯಾಗಿದೆ

15 mins ago

ಸೆಕೆಂಡ್ ​ಹ್ಯಾಂಡ್ ಕಾರು ವ್ಯಾಪಾರಿ ಮೇಲೆ ಹಲ್ಲೆ: ಆರೋಪಿಗಳ ಬಂಧನ

ಹಣಕ್ಕೆ ಬೇಡಿಕೆ ಇಟ್ಟು ನಗರದ ಹಾಗರಗಾ ಕ್ರಾಸ್ ಬಳಿಯ ಮನೆಯೊಂದರಲ್ಲಿ  ಸೆಕೆಂಡ್​ ಹ್ಯಾಂಡ್ ಕಾರು ವ್ಯಾಪಾರಿಯನ್ನು ಬೆತ್ತಲೆ ಮಾಡಿ ಹಲ್ಲೆ…

31 mins ago

ಹೈಕೋರ್ಟ್ ಅಡ್ವೋಕೇಟ್ ಚೈತ್ರಾ ಬಿ.ಗೌಡ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಹೈಕೋರ್ಟ್ ಅಡ್ವೋಕೇಟ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಸಂಜಯನಗರ‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

32 mins ago

ಘಟ್ಟದ ಮೇಲಿನ ಶಾಸಕರನ್ನ ಅವಮಾನಿಸಿದ ಕರಾವಳಿಯ ಶಾಸಕ

ಘಟ್ಟದ ಕಡೆಗಳಲ್ಲಿ ರಸ್ತೆಗಳಿಗೆ ಎರಡು ಹಂಪ್ ಗಳನ್ನ ಹಾಕಿದ್ರೆ ಅಚೀವ್ ಮೆಂಟ್ ಅಂತೆ' ಘಟ್ಟದ ಮೇಲೆ‌ ಶಾಸಕರ ಅಚೀವ್ ಮೆಂಟ್…

41 mins ago