News Karnataka Kannada
Thursday, May 09 2024
ಕರ್ನಾಟಕ

ಮೈಶುಗರ್‌ ಖಾಸಗೀಕರಣದ ಹಿಂದೆ ಯಡಿಯೂರಪ್ಪ ಕುಟುಂಬ ಹಿತಾಸಕ್ತಿ ; ಆಪ್‌ ಆರೋಪ

Aap Bangalore 12 7 21
Photo Credit :

ಬೆಂಗಳೂರು: ಮೈಶುಗರ್‌ ಕಾರ್ಖಾನೆಯ ಖಾಸಗೀಕರಣದ ಹಿಂದೆ ಮುಖ್ಯ ಮಂತ್ರಿ ಬಿ ಯಸ್‌ ಯಡಿಯೂರಪ್ಪ ಕುಟುಂಬದ ಹಿತಾಸಕತಿ ಇದೆ ಎಂದು ಆಮ್‌ ಆದ್ಮಿ ಪಕ್ಷ ಆರೋಪಿಸಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ರವರು ನಾಡಿನ ರೈತರಿಗಾಗಿ ಆರಂಭಿಸಿದ ಮೈಶುಗರ್ ಸಂಸ್ಥೆಯನ್ನು ಖಾಸಗೀಕರಣ ಮಾಡುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡದಿದ್ದರೆ ಭಾರೀ ವಿರೋಧ ಎದುರಿಸಬೇಕಾಗುತ್ತದೆ ಎಂದು ಎಎಪಿಯ ರಾಜ್ಯ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡರವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಂಜಪ್ಪ ಕಾಳೇಗೌಡರವರು, ಮೈಶುಗರ್ ಕಾರ್ಖಾನೆಯನ್ನು ಖಾಸಗಿಯವರಿಗೆ ನೀಡುವುದಿಲ್ಲ, ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿಕೊಳ್ಳುತ್ತೇವೆ ಎಂದು ವಿಧಾನಸಭಾ ಅಧಿವೇಶನದಲ್ಲಿ ಸಿ.ಎಂ.ಯಡಿಯೂರಪ್ಪನವರು ಹೇಳಿದ್ದರು. ಆದರೆ ಈಗ ಅವರೇ ಉಲ್ಟಾ ಹೊಡೆದಿದ್ದಾರೆ. ಯಡಿಯೂರಪ್ಪನವರ ಮಕ್ಕಳು, ಮೊಮ್ಮಕಳು ಆಂಧ್ರ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ್ದು, ಖಾಸಗೀಕರಣದ ನಂತರ ಭಾರೀ ಪ್ರಮಾಣದ ಕಪ್ಪುಹಣವನ್ನು ಇದರಲ್ಲಿ ಹೂಡಿಕೆ ಮಾಡಲು ನಿರ್ಧರಿಸಿದ್ದಾರೆ. ಮೈಶುಗರ್‍ಗಾಗಿ ಎಎಪಿಯು 2016ರಲ್ಲೇ ಬೃಹತ್ ರ್ಯಾಲಿ ನಡೆಸಿದ್ದು, ಈಗ ಅದರ ಖಾಸಗೀಕರಣವನ್ನು ನೋಡಿ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.
ಒಡೆಯರ್‍ರವರು ವಿಶೇಷ ಶ್ರಮವಹಿಸಿ 1933ರಲ್ಲಿ ಮೈಶುಗರ್ ಕಾರ್ಖಾನೆಯನ್ನು ಆರಂಭಿಸಿದರು. ಇದನ್ನು ರಾಜ್ಯದ ಮೊದಲ ಕಾರ್ಖಾನೆ ಎಂದು ಗೌರವದಿಂದ ಕಾಣಲಾಗುತ್ತದೆ. ಸ್ವಾತಂತ್ರ್ಯ ಬಂದು 73 ವರ್ಷವಾದರೂ ರಾಜ್ಯವನ್ನು ಆಳಿದ ಯಾವ ಮುಖ್ಯಮಂತ್ರಿಗೂ ಇಂತಹ ಮತ್ತೊಂದು ಕಾರ್ಖಾನೆಯನ್ನು ಆರಂಭಿಸಲು ಸಾಧ್ಯವಾಗಿಲ್ಲ. ನಾಡಿನ ರೈತರ ಬದುಕನ್ನು ಸುಧಾರಿಸುವುದರಲ್ಲಿ ಮೈಶುಗರ್ ಪಾತ್ರ ಮಹತ್ವದ್ದಾಗಿದೆ. ಕಾರ್ಖಾನೆಯ ನೌಕರರು ಹಾಗೂ ಕಬ್ಬು ಬೆಳೆಗಾರರು ಮೈಶುಗರ್ ಸಂಸ್ಥೆಯೊಂದಿಗೆ ಆರ್ಥಿಕ ಸಂಬಂಧ ಮಾತ್ರವಲ್ಲದೇ ಭಾವನಾತ್ಮಕ ಸಂಬಂಧವನ್ನೂ ಹೊಂದಿದ್ದಾರೆ ಎಂದು ಕಾಳೇಗೌಡರವರು ತಿಳಿಸಿದರು.
ಪ್ರತಿದಿನವೂ 5 ಟನ್ ಸಕ್ಕರೆ ಅರೆಯುವ ಸಾಮರ್ಥ್ಯವನ್ನು ಮೈಶುಗರ್ ಕಾರ್ಖಾನೆ ಹೊಂದಿದೆ. 14 ಸಾವಿರಕ್ಕೂ ಹೆಚ್ಚು ರೈತರು ಇದರ ಷೇರುದಾರರಾಗಿದ್ದಾರೆ. ಈ ಹಿಂದೆ 18ಕ್ಕೂ ಹೆಚ್ಚು ವರ್ಷಗಳ ಕಾಲ ಮೈಶುಗರ್ ಕಂಪನಿಯು ಶೇ. 20ರಿಂದ ಶೇ. 30ರಷ್ಟು ಡಿವಿಡೆಂಡ್ ನೀಡಿದ ಕೀರ್ತಿ ಹೊಂದಿದೆ. 14ಕ್ಕೂ ಹೆಚ್ಚು ಫಾರ್ಮ್‍ಗಳು, ವಿದ್ಯಾಸಂಸ್ಥೆಗಳು ಮತ್ತು ರೈತ ಸಮುದಾಯ ಭವನಗಳು ಸೇರಿ 207 ಎಕರೆಗಿಂತ ಹೆಚ್ಚಿನ ಭೂಮಿಯು ಮೈಶುಗರ್ ಸಂಸ್ಥೆಯ ಬಳಿಯಲ್ಲಿದೆ. ಇಷ್ಟು ಸಮೃದ್ಧವಾದ ಇತಿಹಾಸ ಹೊಂದಿರುವ ಸಂಸ್ಥೆಯು ಸರ್ಕಾರದ ನಿರ್ಲಕ್ಷ್ಯದಿಂದಾಗಿ ಸ್ಥಗಿತಗೊಂಡಿದೆ. ಸರ್ಕಾರವು ಬಂಡವಾಳ ಹೂಡಿ ಸಂಸ್ಥೆಯನ್ನು ಆಧುನೀಕರಣಗೊಳಿಸಬೇಕೇ ಹೊರತು ಖಾಸಗೀಕರಣದ ಹೆಸರಿನಲ್ಲಿ ಮಾರಾಟ ಮಾಡಬಾರದು ಎಂದು ನಂಜಪ್ಪ ಕಾಳೇಗೌಡ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು