News Karnataka Kannada
Monday, April 29 2024
ಕರ್ನಾಟಕ

ಯಡಿಯೂರಪ್ಪ ರಾಜೀನಾಮೆಯಿಂದ ಮನನೊಂದ ಅಭಿಮಾನಿಯ ಆತ್ಮಹತ್ಯೆ

Bsy Fan
Photo Credit :

ಚಾಮರಾಜನಗರ : ಮುಖ್ಯ ಮಂತ್ರಿ ಬಿಎಸ್​ ಯಡಿಯೂರಪ್ಪನವರ ರಾಜೀನಾಮೆಯಿಂದ ಮನನೊಂದ ಅವರ ಅಭಿಮಾನಿಯೊಬ್ಬ ನೇಣು ಹಾಕಿಕೊಂಡು ಸಾವನ್ನಪ್ಪಿದ್ದಾರೆ. ಮೃತರನ್ನು ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ(35) ಎಂದು ಗುರುತಿಸಲಾಗಿದೆ. ರವಿಯು ಮೊದಲಿನಿಂದಲೂ ಬಿಎಸ್​ವೈ ಅಭಿಮಾನಿ ಆಗಿದ್ದು ಟೀ ಕ್ಯಾಂಟೀನ್ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. ಮಂಗಳವಾರ ಬೆಳಗ್ಗೆ ಟೀ ಕ್ಯಾಂಟೀನ್​ನಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಸಾವಿಗೀಡಾದ ರವಿ ವಿಪರೀತ ಸಾಲ ಮಾಡಿಕೊಂಡಿದ್ದರು. ಸಾಲದ ಜೊತೆಗೆ ನಿನ್ನೆ ಬಿಎಸ್​ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ರವಿ ಮನನೊಂದಿದ್ದರು. ಇಂದು ಮುಂಜಾನೆ ಬೇಜಾರಿನಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಮ್ಮ ಅಭಿಮಾನಿ ಸಾವಿಗೆ ಹಂಗಾಮಿ ಸಿಎಂ ಬಿಎಸ್​ ಯಡಿಯೂರಪ್ಪ ಟ್ವೀಟ್ ಮಾಡಿ ಸಂತಾಪ ವ್ಯಕ್ತಪಡಿಸಿದ್ದಾರೆ.
ನನ್ನ ರಾಜೀನಾಮೆಯಿಂದ ಮನನ್ನೊಂದ ಗುಂಡ್ಲುಪೇಟೆ ತಾ॥ ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.(1/2)
ರಾಜಕಾರಣದಲ್ಲಿ ಏರಿಳಿತಗಳು ಸಹಜ , ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು.
ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈಮುಗಿದು ವಿನಂತಿಸುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ. (2/2)
ಎಂದು ಹಂಗಾಮಿ ಸಿಎಂ ಬಿಎಸ್ವೈ ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು