News Karnataka Kannada
Wednesday, May 08 2024
ಕರ್ನಾಟಕ

ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಹೊಯ್ಸಳ ದೇವಾಲಯಗಳು ಸೇರ್ಪಡೆ

 Unesco
Photo Credit : News Kannada

ನವದೆಹಲಿ: ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು ಸೇರ್ಪಡೆ ಮಾಡಲಾಗಿದೆ.

ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದೆ. ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.

ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು