News Karnataka Kannada
Wednesday, May 08 2024
ಕರ್ನಾಟಕ

ರಾಜ್ಯದಲ್ಲಿ ಇಂದಿನಿಂದ ನ.6 ರವರೆಗೆ ಭಾರೀ ಮಳೆ

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್ 6ರವರೆಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಇಂದು ಗುಡುಗು, ಸಿಡಿಲಿನಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ.

ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ನವೆಂಬರ್‌ 4ರಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು