ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿಗಳು ಪ್ರಾರಂಭ

ಬೆಂಗಳೂರು :  ರಾಜ್ಯದಲ್ಲಿ ಇಂದಿನಿಂದ 6,7,8 ನೇ ತರಗತಿಗಳು ಪ್ರಾರಂಭವಾಗಲಿದೆ. ಕೋವಿಡ್ ನಿಯಮ ಅನುಸರಿಸಿ ಶಾಲೆ ಆರಂಭಿಸಲಾಗುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ತರಗತಿ ನಡೆಯಲಿವೆ. ಶನಿವಾರ ಮತ್ತು ಭಾನುವಾರ ಶಾಲೆಗೆ ರಜೆ ಇರಲಿದೆ.

ಈಗಾಗಲೇ 9 ರಿಂದ 12 ನೇ ತರಗತಿವರೆಗೆ ಶಾಲಾ ಕಾಲೇಜು ಆರಂಭವಾಗಿದ್ದು, ಉತ್ತಮ ಪ್ರತಿಕ್ರಿಯೆ ದೊರೆತಿದೆ. ಈಗಾಗಲೇ ಶಾಲೆ ಆರಂಭಕ್ಕೆ ಸರ್ಕಾರ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಶಾಲೆಗಳಲ್ಲಿ ಮಾಸ್ಕ್, ಸ್ಯಾನಿಟೈಸರ್ ನೀಡಲಾಗುತ್ತದೆ. ಜೊತೆಗೆ ಬಿಸಿನೀರಿನ ಘಟಕ ಇಡಲಾಗಿದೆ.

ಇದೀಗ 6-12 ನೇ ತರಗತಿವರೆಗೆ ಎಲ್ಲ ತರಗತಿಗಳು ಆರಂಭವಾದಂತಾಗಿದೆ. ಇನ್ನು 1-5 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ತೆರೆಯುವ ಬಗ್ಗೆ ಆಲೋಚಿಸಲಾಗುತ್ತಿದೆ. ಕೊರೋನಾ ಭೀತಿ ಇನ್ನೂ ತಗ್ಗದ ಕಾರಣ ಜೊತೆಗೆ ಸಾಲು ಸಾಲು ಹಬ್ಬಗಳು ಇರುವುದರಿಂದ1-5 ನೇ ತರಗತಿ ಶಾಲೆ ಸದ್ಯಕ್ಕಿಲ್ಲ ಎನ್ನಲಾಗಿದೆ. ಅವರಿಗೆ ಎಂದಿನಂತೆ ಆನ್‌ಲೈನ್ ತರಗತಿ ನಡೆಯುತ್ತಿದೆ.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

6 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

6 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

7 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

7 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

8 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

8 hours ago