News Karnataka Kannada
Saturday, May 11 2024
ಕರ್ನಾಟಕ

ರಾಜ್ಯದಲ್ಲಿ ಇಂದು ಮಳೆ ಜೋರಾಗಲಿದ್ದು ಕೆಲ ಜಿಲ್ಲೆಗಳಲ್ಲಿ ರೆಡ್‌ ಅಲರ್ಟ್‌ : ಐಎಂಡಿ

Rain Main Newsk 2307886304 1
Photo Credit :

ಬೆಂಗಳೂರು ; ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಹಿನ್ನೆಲೆಯಲ್ಲಿ ರಾಜ್ಯಾದಾದ್ಯಂತ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಜು.18ರವರೆಗೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿಯಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್​ ತಿಳಿಸಿದ್ದಾರೆ. ಈಗಾಗಲೇ ಉತ್ತರ ಕನ್ನಡ, ದಕ್ಷಿಣ ಕನ್ನಡ, ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ರೆಡ್, ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲೂ ಕೂಡ ಇಂದು ಮತ್ತು ನಾಳೆ ಭಾರೀ ಬಿರುಗಾಳಿ ಸಹಿತ ಮಳೆಯಾಗಲಿದೆ ಎಂದು ನಿರೀಕ್ಷಿಸಲಾಗಿದೆ.
ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಜು. 16ರಂದು ರೆಡ್​ ಅಲರ್ಟ್​ ಘೋಷಣೆ ಮಾಡಲಾಗಿದೆ. ಜು.17ರಂದು ಈ ಪ್ರದೇಶಗಳಲ್ಲಿ ಆರೆಂಜ್​ ಅಲರ್ಟ್​ ಘೋಷಿಸಲಾಗಿದೆ. ಕರಾವಳಿ ಪ್ರದೇಶದ ಮೀನುಗಾರರಿಗೂ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಆದರೆ ಕೊಡಗಿನಲ್ಲಿ ಇಂದು ಬೆಳಗಿನಿಂದಲೇ ಮಳೆ ಕಡಿಮೆ ಆಗಿದ್ದು ಕೆಲವೆಡೆ ಬಿಸಿಲು ಇತ್ತು.
ಚಿತ್ರದುರ್ಗ, ದಾವಣಗೆರೆ, ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಾಧ್ಯತೆ ಇದ್ದು, ಜುಲೈ 18ರಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜುಲೈ 16 ಮತ್ತು 17ರಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರಿನಲ್ಲೂ ಕೂಡ ಮುಂದಿನ ಎರಡು ದಿನ ಮಳೆಯಾಗಲಿದ್ದು ಗರಿಷ್ಠ ಉಷ್ಣಾಂಶ 24 ಡಿಗ್ರಿ ಸೆಂಟಿಗ್ರೇಡ್​, ಕನಿಷ್ಟ ಉಷ್ಣಾಂಶ 20 ಡಿಗ್ರಿ ಇರಲಿದೆ. ದಕ್ಷಿಣ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿರುವ ಪರಿಣಾಮ ಜಿಲ್ಲೆಯ ಪ್ರಮುಖ ನದಿಗಳಾದ ಕುಮಾರಧಾರಾ ಮತ್ತು ನೇತ್ರಾವತಿ ತುಂಬಿ ಹರಿಯುತ್ತಿದೆ. ಘಟ್ಟ ಪ್ರದೇಶಗಳಲ್ಲಿ ಕಳೆದ ನಾಲ್ಕೈದು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಘಟ್ಟ ಪ್ರದೇಶಗಳಿಂದ ಹರಿದು ಬರುವ ಕುಮಾರಧಾರಾ ನದಿಯಲ್ಲಿ ನೀರಿನ ಹರಿವು ಭಾರೀ ಹೆಚ್ಚಳವಾಗಿದೆ. ಕಳೆದ ಎರಡು ನಾಲ್ಕು ದಿನಗಳಿಂದ ಕರ್ನಾಟಕ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಅತಿಹೆಚ್ಚು ಮಳೆಯಾಗುತ್ತಿದೆ. ಕಳೆದೊಂದು ವಾರದಿಂದ ಕೊಂಚ ವಿರಾಮ ನೀಡಿದ್ದ ಮಳೆ ಕಳೆದ ಮೂರು ದಿನಗಳಿಂದ ಬಿರುಸು ಕೊಂಡಿದೆ. ಈಗಾಗಲೇ ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ಇನ್ನು ಮೂರು ದಿನ ಇದೇ ರೀತಿ ಮಳೆಯಾಗಲಿದೆ. ಅರಬ್ಬಿ ಸಮುದ್ರದಲ್ಲಿ ಏಳುವ ಗಾಳಿಯಿಂದ ಅಲೆಗಳ ಹೊಡೆತ ಇನ್ನಷ್ಟು ಹೆಚ್ಚಲಿದ್ದು, ಕಡಲ ಕೊರೆತ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನಲೆ ಈಗಾಗಲೇ ಈ ಪ್ರದೇಶಗಳಲ್ಲಿ ರೆಡ್​ ಆಲರ್ಟ್​ ಘೋಷಣೆ ಮಾಡಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು