ರಾಜ್ಯದಲ್ಲಿ ಇಂದು 214 ಮಂದಿಗೆ ಕೊರೋನಾ ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 29,83,673ಕ್ಕೆ ಏರಿಕೆಯಾಗಿದೆ. ಇಂದು 12 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,953ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಇಂದು 488 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,527ಕ್ಕೆ ಏರಿಕೆಯಾಗಿದೆ. ಇನ್ನು 9,164 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 77,901 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 214 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.27ಕ್ಕೆ ಇಳಿದಿದೆ.