ರಾಜ್ಯದಲ್ಲಿ ಇಂದು 286 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,91,142ಕ್ಕೆ ಏರಿಕೆಯಾಗಿದೆ.
ಇನ್ನು ರಾಜ್ಯದಲ್ಲಿ ಮಹಾಮಾರಿಗೆ ಇಂದು ಏಳು ಮಂದಿ ಬಲಿಯಾಗಿದ್ದಾರೆ.ಇದರೊಂದಿಗೆ ಸಾವಿನ ಸಂಖ್ಯೆ 38,138ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ರಾಜ್ಯದಲ್ಲಿ ಇಂದು 289 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,44,958ಕ್ಕೆ ಏರಿಕೆಯಾಗಿದೆ. ಇನ್ನು 8,017 ಸಕ್ರೀಯ ಪ್ರಕರಣಗಳಿವೆ.