News Karnataka Kannada
Sunday, May 12 2024
ಬೆಂಗಳೂರು

ರಾಜ್ಯದಲ್ಲಿ ಇನ್ನೂ 4 ದಿನ ಭಾರಿ ಮಳೆ

Heavy rains disrupt normal life in Hubballi
Photo Credit :

ಬೆಂಗಳೂರು : ರಾಜ್ಯದಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಮಳೆ  ಇನ್ನೂ ಕೆಲವು ದಿನಗಳ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ  ಮುನ್ಸೂಚನೆ ನೀಡಿದೆ.

ಅ.26 ರಂದು ರಾಜ್ಯದಿಂದ ಮುಂಗಾರು ನಿರ್ಗಮಿಸಲಿದ್ದು, ಹಿಂಗಾರು ಮಾರುತಗಳು ಆಗಮಿಸಲಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಕಡೆ ಸಿಡಿಲು, ಗುಡುಗು, ಮಿಂಚಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಅಕ್ಟೋಬರ್ 22 ರಿಂದ 24 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು