News Karnataka Kannada
Saturday, May 11 2024
ಬೆಂಗಳೂರು

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಏರಿಕೆ: 1,805 ಹೊಸ ಪ್ರಕರಣ

Corona World 10072021
Photo Credit :

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದೆ. 24 ಗಂಟೆಯಲ್ಲಿ 1,805 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,15,317ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಒಂದೇ ದಿನದಲ್ಲಿ ಮಹಾಮಾರಿಗೆ 36 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,741ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 441 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,29,781ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 7 ಮಂದಿ ಬಲಿಯಾಗಿದ್ದಾರೆ.

ರಾಜ್ಯದಲ್ಲಿ ಇಂದು 1,854 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,54,222ಕ್ಕೆ ಏರಿಕೆಯಾಗಿದೆ. ಇನ್ನು 24,328 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,62,338 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,805 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು