ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೋವಿಡ್ ಪ್ರಕರಣ ಏರಿಕೆಯಾಗುತ್ತಿದೆ. ಕಳೆದ 4 ಗಂಟೆಗಳಲ್ಲಿ ರಾಜ್ಯದಲ್ಲಿ 1857 ಹೊಸ ಪ್ರಕರಣಗಳು ದೃಢಪಟ್ಟಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,24,732ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ 321 ಹೊಸ ಪ್ರಕರಣ ಪತ್ತೆಯಾಗಿದ್ದು, 413 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಐವರು ಸಾವನ್ನಪ್ಪಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 475 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 5 ಮಂದಿ ಮೃತಪಟ್ಟಿದ್ದಾರೆ.
1950 ಸೋಂಕಿತರು ಇಂದು ಗುಣಮುಖರಾಗಿದ್ದು, ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗಿನ ಒಟ್ಟು ಗುಣಮುಖರಾದವರ ಸಂಖ್ಯೆ 2865067ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಸದಸ್ಯ 22728 ಸಕ್ರಿಯ ಪ್ರಕರಣಗಳಿವೆ.
ಸೋಂಕಿನಿಂದ ಇಂದು 30 ಜನರು ಸಾವನ್ನಪ್ಪಿದ್ದಾರೆ. ಇದರೊಂದಿಗೆ ಒಟ್ಟು 36911 ಸೋಂಕಿತರು ರಾಜ್ಯದಲ್ಲಿ ಮೃತಪಟ್ಟಿದ್ದಾರೆ. ಸೋಂಕಿನ ಪ್ರಮಾಣ ಶೇ. 1.15 ರಷ್ಟಿದ್ದು, ಮರಣ ಪ್ರಮಾಣ ಶೇ. 1.61 ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.