News Karnataka Kannada
Wednesday, May 08 2024
ಕರ್ನಾಟಕ

ರಾಜ್ಯದಲ್ಲಿ ಕೋವಿಡ್‌ ಪ್ರಕರಣ ಕೊಂಚ ಇಳಿಮುಖ

Covid
Photo Credit :

ಬೆಂಗಳೂರು: ರಾಜ್ಯದಲ್ಲಿ 1,151 ಕೋವಿಡ್‌ ಹೊಸ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 29,39,767ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.

ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 10 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,155ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 270 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,35,306ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸಾವು ಸಂಭವಿಸಿಲ್ಲ.

ರಾಜ್ಯದಲ್ಲಿ ಇಂದು 1,442 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,82,331ಕ್ಕೆ ಏರಿಕೆಯಾಗಿದೆ. ಇನ್ನು 20,255 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 1,06,364 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,151 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.08ಕ್ಕೆ ಇಳಿದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
149

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು