ರಾಜ್ಯದಲ್ಲಿ ಡೆಂಘೀ ಪ್ರಕರಣಗಳು ಹೆಚ್ಚುತ್ತಿದ್ದು, ವಾರದಲ್ಲೇ 291 ಪ್ರಕರಣಗಳು ದೃಢಪಟ್ಟಿವೆ. ಕೊರೋನಾದಿಂದ ಚೇತರಿಸಿಕೊಳ್ಳುತ್ತಿರುವ ಜನತೆಗೆ ಡೆಂಘೀ ಸಮಸ್ಯೆ ಎದುರಾಗುತ್ತಿದ್ದು, ಸುರಕ್ಷತಾ ಕ್ರಮಗಳ ಬಗ್ಗೆ ಗಮನಹರಿಸಬೇಕಿದೆ.
ಈ ವರ್ಷದ ಮೊದಲ ಆರು ತಿಂಗಳಿನಲ್ಲಿ ಡೆಂಘೀ ನಿಯಂತ್ರಣದಲ್ಲಿತ್ತು. ಮುಂಗಾರು ಮಳೆ ಆಗಮನದ ನಂತರ ಡೆಂಘೀ ಪ್ರಕರಣಗಳಲ್ಲಿ ಏರಿಕೆ ಕಂಡಿದೆ. ಈವರೆಗೆ ಒಟ್ಟು 3,386 ಪ್ರಕರಣಗಳು ದಾಖಲಾಗಿವೆ. ಆರೋಗ್ಯ ಇಲಾಖೆ ಮಾಹಿತಿ ಅನ್ವಯ ಈ ವರ್ಷದಲ್ಲಿ ಡೆಂಘೀ ಜ್ವರಕ್ಕೆ ಯಾವುದೇ ಸಾವು ಸಂಭವಿಸಿಲ್ಲ.
ಎಲ್ಲೆಡೆ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದರೂ, ರಾಜಧಾನಿಯಲ್ಲಿ ಅತಿ ಹೆಚ್ಚು ಡೆಂಘೀ ಪ್ರಕರಣ ಪತ್ತೆಯಾಗಿದೆ. 575 ಮಂದಿಗೆ ಡೆಂಘೀ ಜ್ವರ ಕಾಣಿಸಿದೆ.