ರಾಜ್ಯದಲ್ಲಿ ವ್ಯಾಪಕ ಮಳೆಯಿಂದ ಬೆಳೆ ಹಾನಿ ಆಗಿರುವ ಹಿನ್ನೆಲೆಯಲ್ಲಿ ಬೆಳೆ ಹಾನಿ ಬಗ್ಗೆ ತಕ್ಷಣ ಸರ್ವೆ ನಡೆಸುವಂತೆ ಸೂಚಿಸಿದ್ದೇನೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿಕೆ ನೀಡಿದ್ದಾರೆ.
ವರದಿ ಬಳಿಕ ರೈತರ ಖಾತೆಗೆ ಸರ್ಕಾರದಿಂದ ಪರಿಹಾರ ಹಣ ನೀಡಲಾಗುವುದು. ಎಸ್ಡಿಆರ್ಎಫ್, ಎನ್ಡಿಆರ್ಎಫ್ನಿಂದ ಪರಿಹಾರ ಹಂಚಿಕೆ ಮಾಡಲಾಗುವುದು. ಪರಿಹಾರ ಹಣ ಪರಿಷ್ಕರಣೆ ಬಗ್ಗೆ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದೇವೆ. ಗೈಡ್ಲೈನ್ಸ್ ಬಂದ ಬಳಿಕ ಪರಿಹಾರ ಮೊತ್ತ ಘೋಷಿಸುತ್ತೇವೆ ಎಂದು ಪಾಟೀಲ್ ತಿಳಿಸಿದ್ದಾರೆ.
ರಾಜ್ಯದ ವಿವಿಧೆಡೆ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಬೆಂಗಳೂರು ಸಹಿತ ಕೆಲವು ಜಿಲ್ಲೆಗಳಲ್ಲಿ ಮಳೆ ಅಪಾರ ಹಾನಿ ಉಂಟುಮಾಡಿದೆ. ಜನಜೀವನ ಅಸ್ತವ್ಯಸ್ತವಾಗುವಂತೆ ಮಾಡಿದೆ.