ರಾಜ್ಯದಲ್ಲಿ ಗುರುವಾರ 478 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8557ಕ್ಕೆ ಏರಿಕೆಯಾಗಿದೆ. 17 ಮಂದಿ ಸಾವನ್ನಪ್ಪಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೋನಾ ಪ್ರಮಾಣದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ.
ರಾಜ್ಯದಲ್ಲಿ ಒಂದೇ ದಿನ 334 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬೆಂಗಳೂರಿನಲ್ಲಿ 235 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 7 ಸೋಂಕಿತರು ಸಾವನ್ನಪ್ಪಿದ್ದಾರೆ. 161 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.