News Karnataka Kannada
Thursday, May 02 2024
ಕರ್ನಾಟಕ

ರಾಜ್ಯದಲ್ಲಿ ಮತ್ತೆ ಮುಂಗಾರು ಆರಂಭ, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆ

Rain
Photo Credit :

ರಾಜ್ಯದಲ್ಲಿ ಮತ್ತೆ ಮುಂಗಾರು ಆರಂಭವಾಗಿದ್ದು, ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯದಲ್ಲಿ , ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲೂ ಇಂದು ಭಾರೀ ಮಳೆಯ ನಿರೀಕ್ಷೆ ಇದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಹಾವೇರಿ, ಬೆಳಗಾವಿ, ಕೊಪ್ಪಳ, ಕಲಬುರಗಿ, ರಾಯಚೂರು, ಯಾದಗಿರಿ, ಧಾರವಾಡದಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಅಲರ್ಟ್ ಘೋಷಣೆ ಮಾಡಲಾಗಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಿದೆ.

ಈಗಾಗಲೇ ಆಂಧ್ರಪ್ರದೇಶ, ಒಡಿಶಾ, ಪಶ್ಚಿಮ ಬಂಗಾಳ ಕರಾವಳಿ ಪ್ರದೇಶಗಳಲ್ಲಿ ಗುಲಾಬ್ ಚಂಡಮಾರುತ ಅಪ್ಪಳಿಸಿದ್ದು, ಮುಂದಿನ 12 ಗಂಟೆಗಳಲ್ಲಿ ಅದರ ಪ್ರಭಾವ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು