ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ 1,431 ಮಂದಿಗೆ ಕೋವಿಡ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದೆ.
ಒಂದೇ ದಿನದಲ್ಲಿ ಮಹಾಮಾರಿಗೆ 21 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 36,979ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 305 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,32,902ಕ್ಕೆ ಏರಿಕೆಯಾಗಿದೆ. ಇನ್ನು ನಗರದಲ್ಲಿ ಸೋಂಕಿಗೆ 3 ಮಂದಿ ಬಲಿಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 311 ಮಂದಿ ಸೋಂಕು ದೃಢಪಟ್ಟಿದೆ. ಜಿಲ್ಲೆಯಲ್ಲಿ 4 ಮಂದಿ ಮೃತಪಟ್ಟಿದ್ದಾರೆ.
ರಾಜ್ಯದಲ್ಲಿ ಇಂದು 1,611 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 28,69,962ಕ್ಕೆ ಏರಿಕೆಯಾಗಿದೆ. ಇನ್ನು 22,497 ಸಕ್ರೀಯ ಪ್ರಕರಣಗಳಿವೆ.
ರಾಜ್ಯಾದ್ಯಂತ ಇಂದು 1,52,767 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 1,431 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.93ಕ್ಕೆ ಇಳಿದಿದೆ.
ಮೇ.15 ರಿಂದ ಆರಂಭವಾಗಿದ್ದ ಎಸ್ಎಸ್ಎಲ್ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು ರಾಜ್ಯ…
ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್ನಲ್ಲಿ ಮನೆಗೆ ಹೋಗುವಾಗ ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…
ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…
ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…
ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…