ಕರ್ನಾಟಕ

ರಾಷ್ಟ್ರೀಯ ಹೆದ್ದಾರಿ ಅಗಲೀಕರಣಕ್ಕೆ ಭೂಮಿ ನೀಡಿದ ರೈತರಿಗೆ ಪರಿಹಾರ ಸಿಕ್ಕಿಲ್ಲ

ಮಂಗಳೂರು : ರಸ್ತೆ ಅಭಿವೃದ್ಧಿಗೆ ಭೂಮಿ ಕೊಟ್ಟು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಜನರು ಪರಿಹಾರಕ್ಕಾಗಿ ಪರದಾಡುವಂತಾಗಿದೆ.
ಮಂಗಳೂರು- ಕಡೂರು ರಾಷ್ಟ್ರೀಯ ಹೆದ್ದಾರಿಯ ಬಿ.ಸಿ. ರೋಡ್- ಚಾರ್ಮಾಡಿ ರಸ್ತೆ ಅಗಲೀಕರಣಕ್ಕೆ ಭೂಮಿ ಕೊಟ್ಟ ಜನರು ಈಗ ಪರಿಹಾರಕ್ಕಾಗಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಚೇರಿಗೆ ಅಲೆದಾಡುವಂತಾಗಿದೆ. ಭೂಸ್ವಾಧಿನವಾಗಿ ಮೂರು ವರ್ಷ ಕಳೆದರೂ ಇನ್ನೂ ಪರಿಹಾರ ಸಿಗದೆ ಜನರು ಕಂಗಲಾಗಿದ್ದಾರೆ. ಬಿ.ಸಿ ರೋಡ್- ಪೂಂಜಾಲಕಟ್ಟೆಯ ಸುಮಾರು 19 ಕಿಲೋಮೀಟರ್ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿಗೆ ಸರ್ಕಾರ 100 ಎಕರೆಗಿಂತ ಹೆಚ್ಚು ಪ್ರದೇಶವನ್ನು ಸ್ವಾಧೀನ ಪಡಿಸಿಕೊಂಡಿತ್ತು. ಇದೀಗ ರಸ್ತೆ ಕಾಮಗಾರಿ ಪೂರ್ಣವಾದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾತ್ರ ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ನೀಡಿಲ್ಲ‌. ಮನೆ ಕಳೆದುಕೊಂಡವರಿಗೆ ಮಾತ್ರ ಪರಿಹಾರ ನೀಡಿ ಇಲಾಖೆ ಕೈ ತೊಳೆದುಕೊಂಡಿದೆ.
ಕೃಷಿ ಭೂಮಿ ಸೇರಿದಂತೆ ಇತರ ಭೂಮಿ ಕಳೆದುಕೊಂಡವರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೇವಲ ಪರಿಹಾರದ ಪತ್ರ ನೀಡಿ ಸಮಾಧಾನಪಡಿಸುವ ಕೆಲಸವನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿದೆ. ಸುಮಾರು 200ಕ್ಕೂ ಹೆಚ್ಚು ಜನರ ಭೂಮಿಯನ್ನು ಇಲಾಖೆ ಸ್ವಾಧೀನ ಪಡಿಸಿದೆ. ಭೂಮಿ ಕಳೆದುಕೊಂಡು‌ ಮೂರು ವರ್ಷಗಳೇ ಕಳೆದರೂ, ಈಗ ಅಧಿಕಾರಿಗಳು ಪರಿಹಾರ ಕೇಳಿದರೆ ಕೋವಿಡ್ ನೆಪ ಹೇಳುತ್ತಿದ್ದಾರೆ. ಹೆದ್ದಾರಿ ಪ್ರಾಧಿಕಾರದ ವಿರುದ್ಧ ಹೋರಾಟ ನಡೆಸಲು ಭೂಮಿ ಕಳೆದುಕೊಂಡ ಸಂತ್ರಸ್ತರು ನಿರ್ಧರಿಸಿದ್ದು, ಪರಿಹಾರ ನೀಡದಿದ್ದರೆ ರಸ್ತೆಗೆ ಬೇಲಿ ಹಾಕಲು ತೀರ್ಮಾನ ಮಾಡಿದ್ದಾರೆ.

Indresh KC

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

13 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

41 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago