Categories: ಕರ್ನಾಟಕ

ರೈತರ ಆದಾಯ ದ್ವಿಗುಣಕ್ಕೆ ಎರಡನೇ ಕೃಷಿ ನಿರ್ದೇಶನಾಲಯ ಆರಂಭ : ಸಿಎಂ

 

ಬೆಂಗಳೂರು ;ರಾಜ್ಯದ ರೈತರ ಆದಾಯ ದ್ವಿಗುಣಗೊಳಿಸಲು ರಾಜ್ಯಸರ್ಕಾರ ಹಲವಾರು ಕ್ರಮಗಳನ್ನು ಜಾರಿಗೊಳಿಸಲಿದ್ದು, ರೈತರ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು 2ನೇ ಕೃಷಿ ನಿರ್ದೇಶನಾಲಯವನ್ನು ಅಸ್ಥಿತ್ವಕ್ಕೆ ತರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ತೋಟಗಾರಿಕೆ, ಹೈನುಗಾರಿಕೆ, ರೇಷ್ಮೆ, ಪಶುಸಂಗೋಪನೆ, ಡೈರಿ, ಮೀನುಗಾರಿಕೆ ಒಳಗೊಂಡಂತೆ ಆಗ್ರೋ ಉತ್ಪನ್ನಗಳ ಸಂಸ್ಕರಣೆಗೆ ಒತ್ತು ನೀಡಿ ಉತ್ಪನ್ನಗಳ ಮೌಲ್ಯ ಹೆಚ್ಚಿಸಲು ವಿಶೇಷ ಕಾರ್ಯಪಡೆಯನ್ನು ರಚಿಸಲಾಗುವುದು. ಇದಕ್ಕೆ ಸೆಕೆಂಡರಿ ಅಗ್ರಿಕಲ್ಚರ್ ಡೈರೆಕ್ಟರೇಟ್ ಎಂದು ಹೆಸರಿಟ್ಟು ಕೃಷಿಯಲ್ಲಿ ದೊಡ್ಡ ಬದಲಾವಣೆ ಮಾಡುವ ಮೂಲಕ ರೈತರ ಆದಾಯ ದ್ವಿಗುಣಕ್ಕೆ ಒತ್ತು ನೀಡಲಾಗುವುದು ಎಂದು ಹೇಳಿದರು.
2023ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಕಾರ್ಯತಂತ್ರ ಕುರಿತಂತೆ ಕೇಂದ್ರ ಸರ್ಕಾರ ರಚಿಸಿರುವ ಉನ್ನತಾಧಿಕಾರ ಸಮಿತಿಯ ಕಾರ್ಯತಂತ್ರ ಕುರಿತಂತೆ ಕೃಷಿ ಸಚಿವಾಲಯದ ಡಾ.ಅಶೋಕ್ ದಳವಾಯಿ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಪ್ರಾತ್ಯಕ್ಷಿಕೆ ನಡೆಸಿಕೊಟ್ಟ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಡೀ ದೇಶದಲ್ಲೇ ರೈತರ ಆದಾಯವನ್ನು ದ್ವಿಗುಣಗೊಳಿಸಿದ ಮೊದಲ ರಾಜ್ಯ ಕರ್ನಾಟಕ ಎಂಬ ಹೆಗ್ಗಳಿಕೆಗೆ ಪಾತ್ರವಾಗಬೇಕು ಎಂಬ ಬಯಕೆ ತಮ್ಮದು. ರೈತರ ಆದಾಯ ದ್ವಿಗುಣಕ್ಕೆ ಬಹಳಷ್ಟು ಆಸಕ್ತಿ ತೆಗೆದುಕೊಂಡು ಹಲವಾರು ಕ್ರಮಗಳನ್ನು ಜಾರಿಗೊಳಿಸಲಾಗುವುದು.ರೈತರ ಆದಾಯ ದ್ವಿಗುಣಗೊಳಿಸಲು ಕೆಂದ್ರಸರ್ಕಾರ ನಮ್ಮ ಜತೆ ಕೈಜೋಡಿಸಲು ಸಿದ್ಧವಿದೆ. ಹಾಗಾಗಿ ಇಲ್ಲಿ ರೈತರಿರುವ ಸಮಿತಿಯನ್ನು ರಚಿಸಿ ಕೇಂದ್ರದ ಜತೆ ನಿರಂತರ ಸಂಪರ್ಕದಲ್ಲಿಟ್ಟುಕೊಂಡು ಕರ್ನಾಟಕಕ್ಕೆ ಸಂಬಂಧಿಸಿದಂತೆ ನಿರ್ದಿಷ್ಟ ವರದಿಯನ್ನು ಜಾರಿಗೊಳಿಸುತ್ತೇವೆ ಎಂದರು.

Indresh KC

Recent Posts

‘ಕಲ್ಕಿ-2898 AD’ ಚಿತ್ರಕ್ಕೆ ಕನ್ನಡದಲ್ಲಿ ಧ್ವನಿ ನೀಡಿದ ದೀಪಿಕಾ ಪಡುಕೋಣೆ

ನಟ ಪ್ರಭಾಸ್‌ ಅಭಿನಯದ ಬಹುನಿರೀಕ್ಷಿತ 'ಕಲ್ಕಿ-2898 AD' ಚಿತ್ರವು ಬಿಡುಗಡೆಗೆ ಸಿದ್ಧವಾಗಿದ್ದು, ನಟಿ ದೀಪಿಕಾ ಪಡುಕೋಣೆ ತಮ್ಮ ಪಾತ್ರದ ಡಬ್ಬಿಂಗ್‌…

13 mins ago

ಧನುಷ್- ಐಶ್ವರ್ಯ ಇಬ್ಬರೂ ಬೇರೆಯವರೊಟ್ಟಿಗೆ ಡೇಟಿಂಗ್; ಖ್ಯಾತ ಗಾಯಕಿ ಮಾಹಿತಿ

ಕಾಲಿವುಡ್‌ ನಟ ಧನುಷ್‌ ಮತ್ತು ಸೂಪರ್‌ ಸ್ಟಾರ್‌ ರಜನಿಕಾಂತ್‌ ಪುತ್ರಿ ಐಶ್ವರ್ಯಾ ರಜನಿಕಾಂತ್‌ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ.…

21 mins ago

ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಎಚ್​.ಡಿ ರೇವಣ್ಣ ಏನಂದ್ರು ?

ಹಾಸನ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿ ಜಾಮೀನಿನ ಮೇಲೆ ಪರಪ್ಪರ ಅಗ್ರಹಾರ ಜೈಲಿನಿಂದ ಬಿಡುಗಡೆ ಹೊಂದಿದ ಶಾಸಕ…

46 mins ago

ಅಂಕಿತಾ ಓದಿದ ಶಾಲೆಗೆ 1 ಕೋಟಿ ರೂ. ಘೋಷಿಸಿದ ಸಿಎಂ ಸಿದ್ದರಾಮಯ್ಯ

ಈ ವರ್ಷದ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ಬಾಗಲಕೋಟೆಯ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿ ಅಂಕಿತಾ ರಾಜ್ಯಕ್ಕೆ ಫಸ್ಟ್…

59 mins ago

10 ವರ್ಷದಲ್ಲಿ ಪ್ರಧಾನಿ ಮೋದಿ ಆಸ್ತಿ ಏರಿಕೆಯಾಗಿದ್ದು ಎಷ್ಟು?

ಪ್ರಧಾನಿ ನರೇಂದ್ರ ಮೋದಿ ಅವರು ಸತತ 3ನೇ ಬಾರಿ ಲೋಕಸಭಾ ಚುನಾವಣೆಗೆ ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿದ್ದಾರೆ. ಇಂದು ಬೆಳಗ್ಗೆ 11.40ರ…

1 hour ago

ಕರೆಂಟ್ ಕಟ್‌ನಿಂದಾಗಿ ಜನರ ಜೀವನ ಕತ್ತಲು: ವಿದ್ಯುತ್ ಸರಬರಾಜು ಕಚೇರಿಗೆ ಮುತ್ತಿಗೆ

ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಒಂದು ಚಿಕ್ಕ ಮಳೆ ಬಂದರೆ ಸಾಕು ಕೆಲವೊಂದು ಭಾಗಗಳಲ್ಲಿ ಕರೆಂಟ್ ಇಲ್ಲದೆ, ಕತ್ತಲಲ್ಲಿ ಜೀವನ ನಡೆಸುವಂತಾಗಿದೆ.…

2 hours ago