Categories: ಕರ್ನಾಟಕ

ರೈಲ್ವೇ ಹಳಿಯಲ್ಲಿ ಸಿಲುಕಿದ್ದ ವೃದ್ದನ ರಕ್ಷಿಸಿದ ರೈಲ್ವೇ ಚಾಲಕರು

ಮುಂಬೈ: ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕುತಿದ್ದ ವೃದ್ಧನನ್ನು, ಚಾಲಕರು ಸಡನ್ ಬ್ರೇಕ್ ಹಾಕಿ ರಕ್ಷಿಸಿದ್ದಾರೆ. ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಮುಂಬೈನ ಕಲ್ಯಾಣ್‌ ಪ್ರದೇಶದಲ್ಲಿರುವ ರೈಲ್ವೆ ನಿಲ್ದಾಣದ ಫ್ಲಾಟ್‍ಫಾರ್ಮ್ ನಂ.4ರಲ್ಲಿ ಭಾನುವಾರ ಮಧ್ಯಾಹ್ನ 12.45ಕ್ಕೆ ಈ ಘಟನೆ ನಡೆದಿದ್ದು, ಹರಿ ಶಂಕರ್(70) ಎಂಬವರು ರೈಲ್ವೆ ಹಳಿ ದಾಟುವ ವೇಳೆ ರೈಲಿಗೆ ಸಿಲುಕಿದ್ದಾರೆ. ಈ ವೇಳೆ ಚೀಫ್ ಪರ್ಮನೆಂಟ್ ವೇ ಇನ್ಸ್‌ಪೆಕ್ಟರ್‌ ಸಂತೋಷ್ ಕುಮಾರ್, ಲೊಕೊ ಪೈಲಟ್ ಎಸ್.ಕೆ ಪ್ರಧಾನ್ ಮತ್ತು ಸಹಾಯಕ ಲೊಕೊ ಪೈಲಟ್ ರವಿಶಂಕರ್‌ಗೆ ಕೂಗಿ ಹೇಳುವ ಮೂಲಕ ಎಚ್ಚರಿಸಿದ್ದಾರೆ. ಆಗ ಇಬ್ಬರು ಪೈಲಟ್‍ಗಳು ತಕ್ಷಣ ಬ್ರೇಕ್ ಹಾಕಿ ರೈಲಿನ ಕೆಳಗೆ ಸಿಲುಕಿಕೊಂಡಿದ್ದ ವೃದ್ಧನನ್ನು ಹೊರ ಎಳೆದಿದ್ದಾರೆ.
ನಂತರ ರೈಲು ಬರುತ್ತಿರುವ ವೇಳೆ ರೈಲ್ವೆ ಹಳಿಯನ್ನು ದಾಟಬಾರದು ಎಂದು ವೃದ್ಧನಿಗೆ ಎಚ್ಚರಿಕೆ ನೀಡಿದ್ದಾರೆ. ವೃದ್ಧನ ಜೀವವನ್ನು ರಕ್ಷಿಸಿದ ಕಾರ್ಯವನ್ನು ಮೆಚ್ಚಿ ಕೇಂದ್ರ ರೈಲ್ವೆಯ ಜನರಲ್ ಮ್ಯಾನೇಜರ್ ಅಲೋಕ್ ಕನ್ಸಾಲ್ ಇಬ್ಬರು ಲೊಕೊ ಪೈಲಟ್‍ಗಳಿಗೆ ಹಾಗೂ ಸಿಪಿಡಬ್ಲೂಐಗೆ ತಲಾ 2,000ರೂ ನಗದನ್ನು ಬಹುಮಾನವಾಗಿ ಘೋಷಿಸಿದ್ದಾರೆ.

Indresh KC

Recent Posts

ಪ್ರಸಕ್ತ ಸಾಲಿನಿಂದ 3 ವರ್ಷ ಪದವಿ : ಉನ್ನತ ಶಿಕ್ಷಣ ಇಲಾಖೆ

ರಾಜ್ಯ ಶಿಕ್ಷಣ ಆಯೋಗದ ಮಧ್ಯಂತರ ವರದಿ ಅನುಷ್ಠಾನಕ್ಕೆ ಉನ್ನತ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು, ಆಯೋಗದ ಶಿಫಾರಿಸಿನಂತೆ 2024-25ನೇ ಸಾಲಿನ…

5 mins ago

ಹುಟ್ಟೂರಿಗೆ ಆಗಮಿಸಿದ ಮಾಜಿ ಶಾಸಕ ಕೆ.ವಸಂತ ಬಂಗೇರ ಪಾರ್ಥಿವ ಶರೀರ

ದಕ್ಷಿಣ ಕನ್ನಡ ಜಿಲ್ಲೆಯಲ್ಲೇ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿಯ ಶಾಸಕ ಕೆ.ವಸಂತ ಬಂಗೇರ (79)…

32 mins ago

ಮಲಯಾಳಂ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಖ್ಯಾತಿ ಪಡೆದ ನಿರ್ದೇಶಕ ಸಂಗೀತ್ ಶಿವನ್ ಮೇ 8 ರಂದು ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ…

2 hours ago

ಮುಸ್ಲಿಂ ಯುವತಿಯೊಂದಿಗೆ ಮದುವೆ : ಖಾಕಿ ವಿರುದ್ಧ ಹಿಂದೂ ಸಂಘಟನೆ ಪ್ರತಿಭಟನೆ

ಬಾದಾಮಿ ಮೂಲದ ರುಬಿನಾ ಮತ್ತು ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಲ ಬಾಗಲಕೋಟೆ ಎಸ್​ಪಿ ಕಚೇರಿಗೆ ಬಂದಿದ್ದು,…

2 hours ago

ಹಾಸ್ಟೆಲ್‌ ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು…

2 hours ago

ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ ನಿಧನ

ಬೆಳ್ತಂಗಡಿಯ ಬಡವರ ಬಂಧು, ಮಾಜಿ ಶಾಸಕ ವಸಂತ ಬಂಗೇರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ನಿಧನ ಹೊಂದಿರುತ್ತಾರೆ. ಗುರುವಾರ ಮುಂಜಾನೆ…

3 hours ago