Categories: ಕರ್ನಾಟಕ

ರೋಗ ನಿರೋಧಕ ಶಕ್ತಿ ಹೆಚ್ಚಳಕ್ಕೆ ಕ್ರಿಯಾ ಯೋಜನೆ ಅಗತ್ಯ

ಬೆಂಗಳೂರು, ;ಮಕ್ಕಳು ಮತ್ತು ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕ್ರಿಯಾ ಯೋಜನೆಯನ್ನು ರೂಪಿಸಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ರಾಜ್ಯ ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.
ವಿದ್ಯಾರ್ಥಿಗಳು ಮತ್ತು ಮಕ್ಕಳು ಕೋವಿಡ್ ಸೋಂಕಿಗೆ ತುತ್ತಾಗದಂತೆ ನೋಡಿಕೊಳ್ಳಲು ಅವರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವ ಕ್ರಿಯಾ ಯೋಜನೆಯನ್ನು ರೂಪಿಸುವುದು ಅಗತ್ಯವಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಾಲಾ-ಕಾಲೇಜುಗಳನ್ನು ಆರಂಭಿಸುವ ಸರ್ಕಾರದ ನಿರ್ಧಾರ ಸ್ವಾಗತಾರ್ಹವಾಗಿದೆ. ಹಾಗೆಯೇ ಮಕ್ಕಳಲ್ಲಿ ಕೋವಿಡ್ ಸಾಂಕ್ರಾಮಿಕವನ್ನು ನಿಗ್ರಹಿಸುವ ರೋಗ ನಿರೋಧಕ ಶಕ್ತಿ ಇದೆಯೇ ಎಂಬುದನ್ನು ಖಾತ್ರಿಪಡಿಸಿಕೊಳ್ಳುವುದು ಅಷ್ಟೇ ಮುಖ್ಯ ಎಂದು ಅವರು ಹೇಳಿದ್ದಾರೆ.ವಿದ್ಯಾರ್ಥಿಗಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಬೆಳೆಸಲು ರೂಪಿಸುವ ಕ್ರಿಯಾ ಯೋಜನೆ ನಿಖರವಾಗಿರಬೇಕು ಮತ್ತು ಸಮಗ್ರವಾಗಿರಬೇಕು. ಇಡೀ ವಿದ್ಯಾರ್ಥಿ ಸಮೂಹ ಮತ್ತು ಮಕ್ಕಳು ಈ ಯೋಜನೆಯ ವ್ಯಾಪ್ತಿಗೆ ಒಳಪಡಬೇಕು ಎಂದು ಅವರು ಹೇಳಿದ್ದಾರೆ.ಶಾಲೆಗಳಲ್ಲಿ ಕೋವಿಡ್ ಸಂಬಂಧಿತ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಲು ಹಠಾತ್ ಭೇಟಿ ನೀಡುವ ಸಲುವಾಗಿ ಸರ್ಕಾರ ಒಂದು ತಂಡವನ್ನು ನಿಯೋಜಿಸಬೇಕು ಎಂದು ಅವರು ಸರ್ಕಾರಕ್ಕೆ ಸಲಹೆ ಮಾಡಿದ್ದಾರೆ.

Indresh KC

Recent Posts

ಎಸ್‌ಎಸ್‌ಎಲ್‌ಸಿ 2,3ನೇ ಪರೀಕ್ಷೆ ಬರೆಯುವವರಿಗೆ ಸ್ಪೆಷಲ್‌ ಕ್ಲಾಸ್‌ ಯೋಜನೆ

2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶವನ್ನು ಗುರುವಾರ (ಮೇ 9) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ…

32 seconds ago

ಚುನಾವಣೆ ಮುಕ್ತಾಯದ ಬೆನ್ನಲ್ಲೇ ಆಕ್ಟಿವ್ ಆದ ಶಾಸಕ ಪ್ರಭು ಚವಾಣ್

ಲೋಕಸಭಾ ಚುನಾವಣೆ ಮುಕ್ತಾಯ ಬೆನ್ನಲ್ಲೇ ಬೀದರ್ ಜಿಲ್ಲೆ ಔರಾದ್ ಶಾಸಕ ಪ್ರಭು ಚವಾಣ್ ಕ್ಷೇತ್ರದಲ್ಲಿ ಆಕ್ಟಿವ್ ಆಗಿದ್ದಾರೆ. ಅನಾರೋಗ್ಯ ಕಾರಣ…

14 mins ago

ಶಾಸಕ ಇಕ್ಬಾಲ್‌ ಹುಸೇನ್‌ ವಿಡಿಯೋ ವೈರಲ್‌ ಕೇಸ್‌ : ಇಬ್ಬರ ಬಂಧನ

ಶಾಸಕ ಇಕ್ಬಾಲ್‌ ಹಸೇನ್‌ ಅವರು ಮಹಿಳಾ ಕಾಂಗ್ರೆಸ್‌ ಕಾರ್ಯಕರ್ತೆ ಜೊತೆ ವಿಡಿಯೋ ಕಾಲ್‌ನಲ್ಲಿ ಮಾತನಾಡುತ್ತಿದ್ದ ವಿಡಿಯೋ ವೈರಲ್‌ ಮಾಡಿದ್ದ ಆರೋಪದಡಿ…

16 mins ago

ಸುನೀತಾ ವಿಲಿಯಮ್ಸ್‌ ಗಗನಯಾತ್ರೆ ಮತ್ತೆ ಸ್ಥಗಿತ : ಮೇ 17ಕ್ಕೆ ಮುಂದೂಡಿಕೆ

ಭಾರತ ಮೂಲದ ವಿಶ್ವವಿಖ್ಯಾತ ಗಗನಯಾತ್ರಿ ಸುನೀತಾ ವಿಲಿಯಮ್ಸ್‌ ಕೈಗೊಂಡಿರುವ ಗಗನಯಾತ್ರೆಯನ್ನು ಮತ್ತೆ ಮುಂದೂಡಲಾಗಿದೆ

38 mins ago

ನ್ಯೂಸ್ ಕರ್ನಾಟಕ ವರದಿಯ ಫಲಶೃತಿ : ಗೋಳೂರು ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ತಾಲ್ಲೂಕಿನ ಗೋಳೂರು ಗ್ರಾಮದ ಅಂಬೇಡ್ಕರ್ ಬಡಾವಣೆಯಲ್ಲಿ ಗಬ್ಬೆದ್ದು ನಾರುತ್ತಿರುವ ಚರಂಡಿ ಅವ್ಯವಸ್ಥೆಯ ಬಗ್ಗೆ ನ್ಯೂಸ್ ಕರ್ನಾಟಕ ವಾಹಿನಿಯಲ್ಲಿ ಸುದ್ದಿಯನ್ನು ಪ್ರಸಾರ…

51 mins ago

ಫೋನಿನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದ ಹೂ ತಿಂದ ಯುವತಿ ಸಾವು

ಮೊಬೈಲ್‌ ನಲ್ಲಿ ಮಾತಾಡುತ್ತಾ ಅಂಗಳದಲ್ಲಿ ಬೆಳೆದಿದ್ದ ಕಣಗಿಲೆ ಹೂವನ್ನು ಕಿತ್ತು ತಿಂದ ಪರಿಣಾಮ ಯುವತಿಯೊಬ್ಬಳು ಪ್ರಾಣವನ್ನೇ ಕಳೆದುಕೊಂಡಿರುವ ಅಹಿತಕರ ಘಟನೆ…

1 hour ago