Categories: ಕರ್ನಾಟಕ

ಲಾರಿ ಡಿಕ್ಕಿ:ಕಲ್ಲಿನ ಕೋರೆಯಲ್ಲಿ ಕಾರ್ಮಿಕ ಸಾವು

ಬಂಟ್ವಾಳ: ಕಲ್ಲಿನ‌ ಕೋರೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನೋರ್ವನಿಗೆ ಟಿಪ್ಪರ್ ಲಾರಿಯೊಂದು ಹಿಂದಿಯಿಂದ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ಇರಾ ಎಂಬಲ್ಲಿ ಗುರುವಾರ ನಡೆದಿದೆ.

ಮಂಜೇಶ್ವರದ ನಿವಾಸಿ, ಸೈಯದ್ ಸುಬಾನ್ (೩೯) ಮೃತ ಕಾರ್ಮಿಕ. ಇಂದು ಬಂಟ್ವಾಳ ತಾಲೂಕಿನ ಇರಾ ಗ್ರಾಮದ ಮುಳೂರು ಎಂಬಲ್ಲಿ ವೀರಣ್ಣ ಕುಟ್ಟಿ ಎಂಬವರಿಗೆ ಸೇರಿದ ಕಲ್ಲಿನ ಕೋರೆಯಲ್ಲಿ ಕೆಲಸ ಮಾಡುತ್ತಿದ್ದಾಗ ಟಿಪ್ಪರ್ ಲಾರಿಯು ಹಿಂಬದಿಯಿಂದ ಢಿಕ್ಕಿಯಾಗಿದೆ‌. ಪರಿಣಾಮ ಸುಬಾನ್ ಕೋರೆಗೆ ಬಿದ್ದು ಮೃತಪಟ್ಟಿರುವುದಾಗಿ ಸಹೋದ್ಯೋಗಿ ಉಮರ್ ಎಂಬವರು ಪೊಲೀಸ್ ದೂರಿನಲ್ಲಿ ತಿಳಿಸಿದ್ದಾರೆ.

ಸುಬಾನ್ ಅವರ ಸಾವಿನ ಬಗ್ಗೆ ಸಂಶಯ ವ್ಯಕ್ತ ಪಡಿಸಿ ಸ್ಥಳೀಯರು ಪೊಲೀಸರಿಗೆ ಹೇಳಿಕೆ ನೀಡಿರುವುದಾಗಿ ತಿಳಿದುಬಂದಿದೆ.

ಈ ಸಂಬಂಧ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Desk

Recent Posts

ವಕೀಲ ದೇವರಾಜೆಗೌಡ ಮತ್ತೆ 2 ದಿನ ಎಸ್‌ಐಟಿ ಕಸ್ಟಡಿಗೆ

ಜಿಲ್ಲೆಯ 5ನೇ ಸಿವಿಲ್ ಕೋರ್ಟ್‌ನಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶರು,…

5 mins ago

ಕೇರಳದಲ್ಲಿ ಭಾರೀ ಮಳೆ : ರೆಡ್ ಅಲರ್ಟ್ ಘೋಷಣೆ

ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿರುವಂತೆಯೇ ದೇವರನಾಡು ಕೇರಳದಲ್ಲಿ ಭಾರಿ ಮಳೆಯಾಗುತ್ತಿದ್ದು, ಶನಿವಾರ ಭಾರತೀಯ ಹವಾಮಾನ ಇಲಾಖೆ (IMD) ರೆಡ್ ಅಲರ್ಟ್…

21 mins ago

ವಿಧಾನಪರಿಷತ್ ಚುನಾವಣೆ : ನಾಮಪತ್ರ ಅಂಗೀಕಾರ,ತಿರಸ್ಕೃತ ಅಭ್ಯರ್ಥಿಗಳ ಪಟ್ಟಿ ರಿಲೀಸ್

ರಾಜ್ಯ ವಿಧಾನ ಪರಿಷತ್​ಗೆ ನೈಋತ್ಯ, ಈಶಾನ್ಯ, ಬೆಂಗಳೂರು ಪದವೀಧರ ಕ್ಷೇತ್ರಗಳು ಹಾಗೂ ಆಗ್ನೇಯ, ನೈಋತ್ಯ ಶಿಕ್ಷಕರ ಕ್ಷೇತ್ರ, ದಕ್ಷಿಣ ಶಿಕ್ಷಕರ…

43 mins ago

ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ : ಫೀಲ್ಡಿಂಗ್​ ಆಯ್ಕೆ

ಪ್ಲೇ ಆಫ್​ ಪ್ರವೇಶಕ್ಕೆ ಮಹತ್ವವಾದ ಶನಿವಾರದ ಐಪಿಎಲ್(IPL 2024)​ ಪಂದ್ಯದಲ್ಲಿ ಆರ್​ಸಿಬಿ ವಿರುದ್ಧ ಹಾಲಿ ಚಾಂಪಿಯನ್ ಚೆನ್ನೈ ಸೂಪರ್​ ಕಿಂಗ್ಸ್​​…

1 hour ago

ಶಿಕ್ಷಕ-ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ಗೆಲುವು ನಿಶ್ಚಿತ : ಜಾರ್ಜ್

ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆ ಮಾದರಿಯಂ ತೆ, ವಿಧಾನ ಪರಿಷತ್ ಚುನಾವಣೆಯಲ್ಲೂ ಕಾರ್ಯಕರ್ತರುಗಳು ಅಭ್ಯರ್ಥಿಗಳ ಪರವಾಗಿ ಬೂತ್‌ಮಟ್ಟ ದಿಂದ…

2 hours ago

ಆಸ್ಪತ್ರೆಯಲ್ಲಿ ಶುಶ್ರೂಷಕಿಯರ ಪಾತ್ರ ಮಹತ್ವದ್ದು ಡಾ.ಮೋಹನ್‌ಕುಮಾರ್

ಆಸ್ಪತ್ರೆಯಲ್ಲಿ ಶುಶ್ರೂ?ಕಿಯರ ಪಾತ್ರ ಮಹತ್ವದ್ದು, ದಾದಿಯರು ಯಾ ವಾಗಲೂ ಹಸನ್ಮುಖಿಯರಾಗಿ ರೋಗಿಗಳ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಲ್ಲೇಗೌಡ ಜಿಲ್ಲಾ ಸ್ಪತ್ರೆ…

3 hours ago