News Karnataka Kannada
Monday, May 06 2024
ಕರ್ನಾಟಕ

ವಲಯ ಮಟ್ಟದ ಕ್ರೀಡೆಯಲ್ಲಿ ಬಣಕಲ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

Photo Credit :

ವಲಯ ಮಟ್ಟದ ಕ್ರೀಡೆಯಲ್ಲಿ ಬಣಕಲ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಬಣಕಲ್: ಪ್ರೌಢಶಾಲೆಗಳ ವಲಯ ಮಟ್ಟದ ಕ್ರೀಡಾಕೂಟವು ಇತ್ತೀಚೆಗೆ ಗಬ್ಗಲ್ನಲ್ಲಿ ನಡೆಯಿತು.ಅದರಲ್ಲಿ ಬಣಕಲ್ ಪ್ರೌಢಶಾಲಾ ಮಕ್ಕಳು ಕ್ರೀಡೆಯಲ್ಲಿ ಭಾಗವಹಿಸಿ ಸಮಗ್ರ ಪ್ರಶಸ್ತಿ ಪಡೆದಿದ್ದಾರೆ ಎಂದು ಬಣಕಲ್ ಪ್ರೌಢಶಾಲಾ ಮುಖ್ಯ ಶಿಕ್ಷಕ ಹೆಚ್.ಟಿ.ರಾಮಚಂದ್ರ ತಿಳಿಸಿದ್ದಾರೆ.

ಬಣಕಲ್ ಶಾಲೆಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಥ್ಲೆಟಿಕ್ಸ್ ಬಾಲಕರ ವಿಭಾಗದಲ್ಲಿ ಶೂಯೈಬ್ 100ಮೀ ಓಟ ಪ್ರಥಮ ಹಾಗೂ 200ಮೀ ಓಟ ದ್ವಿತೀಯ ಸ್ಥಾನ ಹಾಗೂ ಟ್ರಿಫಲ್ ಜಂಪ್ನಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ನಿಖಿಲ್ ಹ್ಯಾಮರ್ ಥ್ರೋನಲ್ಲಿ ಪ್ರಥಮ ಸ್ಥಾನ ಪಡೆದರೆ ಸುಜಯ್ ವಾಕ್ ರೇಸ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಅಪ್ರೀದಿ ಎತ್ತರ ಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದರೆ ವಿದ್ಯಾರ್ಥಿ ಸಂತೋಷ್ 400 ಮೀ ಓಟದಲ್ಲಿ ಪ್ರಥಮ ಹಾಗೂ 1500ಮೀ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.

ಮಂಜು ಟ್ರಿಪಲ್ ಜಂಪ್ನಲ್ಲಿ ತೃತೀಯ ಸ್ಥಾನ ಪಡೆದರೆ ನವೀನ್ ಶಾಟ್ಪುಟ್ನಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ.ಬಣಕಲ್ ಪ್ರೌಢಶಾಲಾ ವಿದ್ಯಾರ್ಥಿಗಳ ತಂಡ ಕಬಡ್ಡಿಯಲ್ಲಿ ದ್ವಿತೀಯ ಹಾಗೂ ವಾಲಿಬಾಲ್ನಲ್ಲಿ ಪ್ರಥಮ ಸ್ಥಾನ ಪಡೆದು ಕೋಕೋ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಬಾಲಕೀಯರ ಅಥ್ಲೆಟಿಕ್ಸ್ ವಿಭಾಗದಲ್ಲಿ ವಿದ್ಯಾರ್ಥಿನಿ ಕಾವೇರಿ 100 ಮೀ ಓಟ ಹಾಗೂ ಉದ್ದ ಜಿಗಿತ ಮತ್ತು ಎತ್ತರ ಜಿಗಿತದಲ್ಲಿ ಪ್ರಥಮ ಸ್ಥಾನ ಪಡೆದು ಹ್ಯಾಟ್ರಿಕ್ ದಾಖಲೆ ಸ್ಥಾಪಿಸಿದ್ದಾಳೆ ಎಂದು ತಿಳಿಸಿದ್ದಾರೆ.

ವಿದ್ಯಾರ್ಥಿನಿ ಕವನ 200ಮೀ ಹಾಗೂ 400ಮೀ ಓಟದಲ್ಲಿ ಪ್ರಥಮ ಮತ್ತು ಟ್ರಿಪಲ್ ಜಂಪ್ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.ಪ್ರೀಯ ಟ್ರಿಪಲ್ ಜಂಪ್ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಬಣಕಲ್ ಪ್ರೌಢಶಾಲಾ ವಿದ್ಯಾರ್ಥಿನಿಯರ ತಂಡ ವಾಲಿಬಾಲ್ನಲ್ಲಿ ಪ್ರಥಮ ಸ್ಥಾನ ಪಡೆದರೆ ಬ್ಯಾಡ್ ಮಿಟನ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ರಿಲೇಯಲ್ಲಿ ಬಣಕಲ್ ಪ್ರೌಢಶಾಲಾ ವಿದ್ಯಾರ್ಥಿನಿಯರ ತಂಡ ಪ್ರಥಮ ಸ್ಥಾನ ಪಡೆಯುವ ಮೂಲಕ ಬಣಕಲ್ ಪ್ರೌಢಶಾಲಾ ತಂಡ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು