ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆಯ ಪುನರಾರಂಭ

ಬೆಂಗಳೂರು : ವಿದ್ಯಾರ್ಥಿಗಳಿಗೆ ಬಿಸಿಯೂಟ ವ್ಯವಸ್ಥೆಯನ್ನು ಪುನರಾರಂಭಿಸೋದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಈ ಮೂಲಕ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲು ಹೊರಟಿದೆ.ಅಕ್ಟೋಬರ್ 1ರಿಂದ ರಾಜ್ಯದಲ್ಲಿ 6 ರಿಂದ 12ನೇ ತರಗತಿಗಳ ಶಾಲಾ-ಕಾಲೇಜುಗಳು ಪೂರ್ಣ ಪ್ರಮಾಣದಲ್ಲಿ ಭೌತಿಕ ತರಗತಿಗಳು ಆರಂಭಗೊಳ್ಳಲಿವೆ.ರಾಜ್ಯದಲ್ಲಿ ಕೊರೋನಾ ಸೋಂಕಿನ ಮುಂಜಾಗ್ರತಾ ಕ್ರಮದಿಂದಾಗಿ ಶಾಲಾ-ಕಾಲೇಜು ಬಂದ್ ಮಾಡಲಾಗಿತ್ತು. ಕೊರೋನಾ ಇಳಿಕೆಯಿಂದಾಗಿ ಮತ್ತೆ ಶಾಲಾ-ಕಾಲೇಜುಗಳನ್ನು ಆರಂಭವಾಗದ ಕಾರಣ ಬಿಸಿಯೂಟದ ಆಹಾರಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡುತ್ತಿತ್ತು. ಇದೀಗ ಶಾಲಾ-ಕಾಲೇಜು ಆರಂಭದ ನಂತ್ರ ವಿದ್ಯಾರ್ಥಿಗಳಿಗಾಗಿ ಮತ್ತೆ ಬಿಸಿಯೂಟ ಯೋಜನೆಯನ್ನು ಪುನರಾರಂಭಿಸೋದಕ್ಕೆ ಚಿಂತನೆ ನಡೆಸಿದೆ.ಈ ಕುರಿತಂತೆ ಮಾತನಾಡಿದಂತ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ನಾನು ಶಾಲೆಗಳಿಗೆ ಭೇಟಿ ನೀಡಿ ಮಕ್ಕಳೊಂದಿಗೆ ಸಮಾಲೋಚನೆ ನಡೆಸುತ್ತಿದ್ದೇನೆ. ಈ ವೇಳೆ ಮಕ್ಕಳು ತಾವು ಮನೆಯಿಂದ ಊಟ ತರ್ತಾ ಇರೋದಾಗಿ ತಿಳಿಸಿದ್ದಾರೆ. ಈ ಮಕ್ಕಳಿಗೆ ಅನುಕೂಲ ಆಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟದ ಯೋಜನೆ ಆರಂಭಿಸೋ ಚಿಂತನೆ ನಡೆಸಲಾಗಿದೆ ಎಂದರು.

ಅಂದಹಾಗೇ ಅಕ್ಟೋಬರ್ 1ರಿಂದ ಇದುವರೆಗೆ ಶೇ.50ರಷ್ಟು ವಿದ್ಯಾರ್ಥಿಗಳ ಹಾಜರಾತಿ ನಿಯಮ ಬದಲಾಗಲಿದೆ. ಶೇ.100ರಷ್ಟು ವಿದ್ಯಾರ್ಥಿಗಳ ಹಾಜರಿಗೆ ಸರ್ಕಾರ ಅನುಮತಿಸಿದೆ. ಇದೇ ಸಂದರ್ಭ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಮಧ್ಯಾಹ್ನದ ಬಿಸಿಯೂಟ ಯೋಜನೆ ಶೀಘ್ರವೇ ಪುನರಾರಂಭಿಸಲಿದೆ.

Swathi MG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

5 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

5 hours ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

6 hours ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

6 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

7 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

7 hours ago