2021-22 ನೇ ಸಾಲಿನ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ನೀಡುವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು 15/12/2021 ಕೊನೆಯ ದಿನಾಂಕವಾಗಿದ್ದು. ಇನ್ನೂ ಕೂಡ ಅರ್ಜಿ ಸಲ್ಲಿಸದೇ ಇರುವ ವಿದ್ಯಾರ್ಥಿಗಳು ಆದಷ್ಟು ಬೇಗ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದೆ.
ಇನ್ನೂ, ಮನೆಯಿಂದ ಕಾಲೇಜಿಗೆ 6 ಕಿ. ಮೀ ದೂರವಿದ್ದು ಸರ್ಕಾರಿ ಹಾಸ್ಟೆಲ್ ನಲ್ಲಿ ಪ್ರವೇಶ ಪಡೆಯದೇ ಇರುವ ಕಾಲೇಜು ವಿದ್ಯಾರ್ಥಿಗಳು ದಿನಾಂಕ 30/12/2021 ರ ಒಳಗೆ ವಿದ್ಯಾಸಿರಿ ವಿದ್ಯಾರ್ಥಿವೇತನಕ್ಕೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸುವಂತೆ ಸೂಚನೆ ನೀಡಿದೆ.
ಈಗಾಗಲೇ NSP(ನ್ಯಾಷನಲ್ ಸ್ಕಾಲರ್ಶಿಪ್ ಪೋರ್ಟಲ್) ನಲ್ಲಿ ಅರ್ಜಿ ಸಲ್ಲಿಸಿರುವ ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ SSP( ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್) ನಲ್ಲಿ ಅರ್ಜಿ ಸಲ್ಲಿಸುವಂತೆ ಅಲ್ಪಸಂಖ್ಯಾತರ ನಿಗಮ ಪ್ರಕಟಣೆ ಹೊರಡಿಸಿದ್ದು, ಈ ಬಗ್ಗೆ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚನೆ ಹೊರಡಿಸಿದೆ.