News Karnataka Kannada
Sunday, April 28 2024
ಕರ್ನಾಟಕ

ವಿನಯ ಕುಲಕರ್ಣಿ ತಪ್ಪು ಮಾಡಿಲ್ಲ ಎಂದು ಸಮರ್ಥಿಸಿಕೊಂಡ ಡಿ ಕೆ ಶಿವಕುಮಾರ್‌

D K Shiva Kumar 26 7 21
Photo Credit :

ಬೆಂಗಳೂರು, ; ಬಿಜೆಪಿಯ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್‍ನ ಮಾಜಿ ಸಚಿವ ವಿನಯ್ ಕುಲಕರ್ಣಿ ಯಾವುದೇ ತಪ್ಪು ಮಾಡಿಲ್ಲ, ಶೀಘ್ರವೇ ಅವರು ಕಾನೂನಿನ ಹೋರಾಟದಲ್ಲಿ ಜಯ ಗಳಿಸಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಶ್ವಾಸ ವ್ಯಕ್ತ ಪಡಿಸಿದರು. ಬೆಂಗಳೂರಿನಲ್ಲಿಂದು ಡಿ.ಕೆ.ಶಿವಕುಮಾರ್ ಅವರ ಮನೆಗೆ ವಿನಯ್ ಕುಲಕರ್ಣಿ ಅವರು ಭೇಟಿ ನೀಡಿ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ನಾಯಕರು ಏನೇನು ಮಾತನಾಡಿದ್ದಾರೆ ಎಂದು ಹಳೆಯ ಕಡತ ತೆಗೆದು ನೋಡಿದರೆ ವಿನಯ್ ಕುಲಕರ್ಣಿ ಅವರ ಬಂಧನದ ಹಿಂದಿನ ಕಾರಣ ಸ್ಪಷ್ಟವಾಗಿ ತಿಳಿಯುತ್ತದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಜೈಲಿನ ಒಳಗೆ ಮತ್ತು ಹೊರಗೆ ಅನುಭವಿಸಿದ ನೋವನ್ನು ನನ್ನ ಬಳಿ ಹೇಳಿಕೊಂಡಿದ್ದಾರೆ. ಅದನ್ನೆಲ್ಲಾ ನಾನು ಬಹಿರಂಗವಾಗಿ ಹೇಳಲು ಹೋಗುವುದಿಲ್ಲ. ಅದು ಸದ್ಯಕ್ಕೆ ಅವರಲ್ಲೇ ಇರಲಿ. ಮುಂದಿನ ದಿನಗಳಲ್ಲಿ ವಿನಯ್ ಕುಲಕರ್ಣಿ ಕಾಂಗ್ರೆಸ್ ಪಕ್ಷದ ಸಂಘಟನೆಯಲ್ಲಿ ಕೆಲಸ ಮಾಡಲಿದ್ದಾರೆ. ಪಕ್ಷ ಅವರ ಜೊತೆಯಲ್ಲಿ ನಿಲ್ಲಲಿದೆ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು