News Karnataka Kannada
Saturday, May 04 2024
ಕರ್ನಾಟಕ

ವಿಶ್ವ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು

Photo Credit :

ವಿಶ್ವ ಚಾಂಪಿಯನ್ ಶಿಪ್: ಚಿನ್ನ ಗೆದ್ದು ದಾಖಲೆ ನಿರ್ಮಿಸಿದ ಪಿ.ವಿ.ಸಿಂಧು

ನವದೆಹಲಿ: ಬಿಡಬ್ಲ್ಯೂಎಫ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಚಿನ್ನದ ಪದಕ ಗೆಲ್ಲುವ ಮೂಲಕ ದೊಡ್ಡ ದಾಖಲೆಯನ್ನು ಮಾಡಿದ್ದಾರೆ. ಇವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿ ಟ್ವೀಟ್ ಮಾಡಿದ್ದಾರೆ.

ಮತ್ತೊಮ್ಮೆ ಪಿ.ವಿ ಸಿಂಧು ಅವರು ಭಾರತಕ್ಕೆ ಹೆಮ್ಮೆ ತಂದುಕೊಟ್ಟಿದ್ದಾರೆ. ಬಿ ಡಬ್ಯೂ ಎಫ್ ವಲ್ಡ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಅಪ್ರತಿಮ ಸಾಧನೆಯನ್ನು ಮಾಡಿದ್ದಕ್ಕೆ ಧನ್ಯವಾದಗಳು. ಪಿ ವಿ ಸಿಂಧು ಅವರ ಯಶಸ್ಸು ಕ್ರೀಡಾಪಟುಗಳಿಗೆ ಸ್ಫೂರ್ತಿದಾಯಕವಾಗಿದೆ’ ಎಂದು ಮೋದಿ ಬರೆದುಕೊಂಡಿದ್ದಾರೆ.

ಸ್ವಿಜರ್‌ಲ್ಯಾಂಡ್ ನಲ್ಲಿ ಇಂದು ನಡೆದ ಬಿಡಬ್ಲ್ಯೂ ಎಫ್ ವಿಶ್ವ ಚಾಂಪಿಯನ್ ಶಿಪ್ ನಲ್ಲಿ ಪಿ. ವಿ. ಸಿಂಧು ಜಪಾನ್ ನ ನೋಜೋಕೊ ಓಕುಹರ ಅವರನ್ನು 21-7,21-7 ಅಂತರದಲ್ಲಿ ಜಯವನ್ನು ಸಾಧಿಸಿದರು,

ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿ, ಪಿ. ವಿ. ಸಿಂಧು ಅವರು ತಮ್ಮ ಸಾಧನೆ ನಮ್ಮ ದೇಶಕ್ಕೆ ಹೆಮ್ಮೆ ತಂದಿದೆ ಎಂದು ಬರೆದುಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
181

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು