News Karnataka Kannada
Saturday, May 18 2024
ಕರ್ನಾಟಕ

ಶೀಘ್ರ ಮುಖ್ಯಮಂತ್ರಿಗಳು ಕೊಡಗಿಗೆ ಭೇಟಿ: ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ

Photo Credit :

ಶೀಘ್ರ ಮುಖ್ಯಮಂತ್ರಿಗಳು ಕೊಡಗಿಗೆ ಭೇಟಿ: ಉಸ್ತುವಾರಿ ಸಚಿವ ವಿ.ಸೋಮಣ್ಣ ಭರವಸೆ

ಮಡಿಕೇರಿ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದೇ ಅಕ್ಟೋಬರ್ 25 ಅಥವಾ ನವೆಂಬರ್ 3 ರೊಳಗೆ ಕೊಡಗು ಜಿಲ್ಲೆಗೆ ಭೇಟಿ ನೀಡಲಿದ್ದು, ಮಳೆಹಾನಿ ಸಂತ್ರಸ್ತರಿಗೆ ನೂತನ ಮನೆಗಳನ್ನು ಹಸ್ತಾಂತರಿಸಲಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ತಿಳಿಸಿದ್ದಾರೆ.

ಕೊಡಗಿನ ವಿವಿಧೆಡೆ ಸಂಭವಿಸಿದ ಮಳೆಹಾನಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ಕಾರ್ಯಗಳ ಪ್ರಗತಿ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ಮುಂದಿನ ಒಂದೆರಡು ವಾರಗಳಲ್ಲಿ ಮುಖ್ಯಮಂತ್ರಿಗಳು ಭೇಟಿ ನೀಡುವ ಸಂದರ್ಭ ಜಿಲ್ಲಾ ಪಂಚಾಯತ್ ನೂತನ ಭವನ ಉದ್ಘಾಟನೆ, ಪ್ರವಾಹ ಪೀಡಿತ ಪ್ರದೇಶಗಳ ಸಂತ್ರಸ್ತರಿಗೆ ಮನೆಗಳ ಹಸ್ತಾಂತರ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಿದ್ದಾರೆ ಎಂದರು. ತೋರ ಗ್ರಾಮದಲ್ಲಿ ಸುಮಾರು 10 ಮಂದಿ ಭೂ ಕುಸಿತಕ್ಕೆ ಸಿಲುಕಿ ನಾಲ್ಕು ಮಂದಿ ಕಣ್ಮರೆಯಾಗಿದ್ದಾರೆ. ಈ ಕುಟುಂಬದವರಿಗೆ ಮಾನವೀಯತೆ ದೃಷ್ಟಿಯಿಂದ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ. ಆ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಲಿದೆ ಎಂದು ಸಚಿವರು ನುಡಿದರು.

ಈಗಾಗಲೇ ಮುಖ್ಯಮಂತ್ರಿ ಅವರು ರಾಜ್ಯಾದ್ಯಂತ ಪ್ರವಾಸ ಕೈಗೊಂಡು, ಅತಿವೃಷ್ಟಿ ಪ್ರದೇಶಗಳಿಗೆ ಭೇಟಿ ನೀಡಿ ಪರಿಹಾರ ವಿತರಿಸಲು ಕ್ರಮವಹಿಸಿದ್ದಾರೆ. ಇನ್ನೂ ಎಂಟು ಹತ್ತು ದಿನದಲ್ಲಿ ಬೆಳೆ ಪರಿಹಾರ ವಿತರಿಸಲಾಗುವುದು. ಈಗಾಗಲೇ 10 ಸಾವಿರ ಮತ್ತು 25 ಸಾವಿರ ಪರಿಹಾರವನ್ನು ವಿತರಿಸಲಾಗಿದೆ. ಇದುವರೆಗೆ 4.60 ಕೋಟಿ ರೂ. ಪರಿಹಾರ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕರಾದ ಕೆ.ಜಿ.ಬೋಪಯ್ಯ, ಸುನಿಲ್ ಸುಬ್ರಮಣಿ, ಜಿ.ಪಂ.ಸದಸ್ಯರಾದ ಮೂಕೊಂಡ ಪಿ.ಸುಬ್ರಮಣಿ, ಅಚ್ಚಪಂಡ ಎಂ.ಮಹೇಶ್, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯಾ, ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ತಹಶೀಲ್ದಾರ್ ಮಹೇಶ್ ಇತರರು ಇದ್ದರು.

ಪರಿಹಾರದ ಚೆಕ್ ಹಸ್ತಾಂತರ:-ಜಿಲ್ಲಾ ಉಸ್ತುವಾರಿ ಸಚಿವರಾದ ವಿ.ಸೋಮಣ್ಣ ಅವರು ಶುಕ್ರವಾರ ತೋರ ಗ್ರಾಮಕ್ಕೆ ಭೇಟಿ ನೀಡಿ ಭೂ ಕುಸಿತದಿಂದ ತಾಯಿ, ಹೆಂಡತಿ, ಎರಡು ಹೆಣ್ಣು ಮಕ್ಕಳನ್ನು ಕಳೆದುಕೊಂಡ ಪ್ರಭು ಅವರಿಗೆ ಸಾಂತ್ವನ ಹೇಳಿ ತಲಾ 4 ಲಕ್ಷ ರೂ.ಗಳ ಮೂರು ಚೆಕ್‍ನ್ನು ಹಸ್ತಾಂತರಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು