News Karnataka Kannada
Tuesday, May 07 2024
ಕರ್ನಾಟಕ

ಶುಲ್ಕ ಪಾವತಿಸದಿದ್ದರೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಅವಕಾಶ ; ಸುರೇಶ್‌ ಕುಮಾರ್‌

Suresh Kumar. Minister 15 7 21
Photo Credit :

ಬೆಂಗಳೂರು : ಕೊರೋನಾ ಆತಂಕದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ಗಳು ಜುಲೈ 19 ಮತ್ತು 22 ರಂದು ಪರೀಕ್ಷೆ ನಡೆಯಲಿವೆ. ಶುಲ್ಕ ಪಾವತಿಸದ ಕಾರಣ ಎಸ್​ಎಸ್​ಎಲ್​ಸಿ ಪರೀಕ್ಷೆಗೆ ಹಾಜರಾಗಲು ಯಾವುದೇ ವಿದ್ಯಾ ಸಂಸ್ಥೆಯು ವಿದ್ಯಾರ್ಥಿಗಳಿಗೆ ತೊಂದರೆ ಕೊಡಕೂಡದು ಎಂದು ಪ್ರಾಥಮಿಕ ಮತ್ತ ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್​.ಸುರೇಶ್​ ಕುಮಾರ್​ ಬುಧವಾರ ಎಚ್ಚರಿಸಿದ್ದಾರೆ.
ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಯಾವುದೇ ತೊಂದರೆಗಳನ್ನು ಎದುರಿಸದಂತೆ ಬ್ಲಾಕ್​ ಶಿಕ್ಷಣ ಅಧಿಕಾರಿಗಳು(ಬಿಇಒ) ಸೂಕ್ತ ಕ್ರಮ ತೆಗೆದುಕೊಳ್ಳುತ್ತಾರೆ. ಶುಲ್ಕ ಪಾವತಿಗೆ ಸಂಬಂಧಿಸಿದ ಸಮಸ್ಯೆಗಳಿಂದಾಗಿ ಯಾವುದೇ ವಿದ್ಯಾರ್ಥಿಗೆ ಪರೀಕ್ಷೆಗಳಿಗೆ ಹಾಜರಾಗಲು ಅವಕಾಶ ನಿರಾಕರಿಸಲಾಗುವುದಿಲ್ಲ ಎಂದು ಕರ್ನಾಟಕ ಮಾಧ್ಯಮಿಕ ಶಿಕ್ಷಣ ಪರೀಕ್ಷಾ ಮಂಡಳಿಯ (ಕೆಎಸ್​​ಇಇಬಿ) ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸುರೇಶ್​ ಕುಮಾರ್ ತಿಳಿಸಿದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ. ಅನ್ಬುಕುಮಾರ್ ಅವರು​ ಎಲ್ಲಾ ಹಾಲ್ ಟಿಕೆಟ್​​ಗಳನ್ನು ಜೂನ್​​ 29ರಂದು ಕೆಎಸ್​ಇಇಬಿ ಪೋರ್ಟಲ್​​ಗೆ ಅಪಲೋಡ್​​ ಮಾಡಲಾಗಿದೆ ಎಂದು ಸ್ಪಷ್ಟಪಡಿಸುವ ಸುತ್ತೋಲೆ ಹೊರಡಿಸಿದ್ದಾರೆ. ಸಂಸ್ಥೆಗಳ ಮುಖ್ಯಸ್ಥರು ಪ್ರತಿಯೊಂದು ಶಾಲೆಗೂ ಒದಗಿಸಲಾಗಿರುವ ಲಾಗಿನ್ ಕೋಡ್​ ಬಳಸಿ ಅವುಗಳನ್ನು ಡೌನ್​ಲೋಡ್ ಮಾಡಿಕೊಳ್ಳಬಹುದು.
ವಿದ್ಯಾರ್ಥಿಗಳು ಹಾಲ್ ಟಿಕೆಟ್​ ಪಡೆಯುವ ಬಗ್ಗೆ ಯಾವುದೇ ಸಮಸ್ಯೆ ಇಲ್ಲಿಯವರೆಗೆ ನಮಗೆ ವರದಿಯಾಗಿಲ್ಲ. ಆದರೆ ಕೆಲವರಿಗೆ ತಮ್ಮ ಶಾಲೆಗಳಿಂದ ಹಾಲ್​ ಟಿಕೆಟ್​ ನೀಡಿಲ್ಲ ಎಂಬ ವರದಿ ಕೇಳಿಬಂದ ಹಿನ್ನೆಲೆಯಲ್ಲಿ, ಪರೀಕ್ಷೆಗಳಿಗೆ ನೊಂದಾಯಿಸಿಕೊಂಡ ಎಲ್ಲಾ ವಿದ್ಯಾರ್ಥಿಗಳಿಗೆ ಹಾಲ್​ ಟಿಕೆಟ್​ ನೀಡುವಂತೆ ಬಿಇಒ ಮತ್ತು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಅಂತಹ ಕುಂದುಕೊರತೆಗಳು ಎದುರಾದ ಸಂದರ್ಭದಲ್ಲಿ ವಿದ್ಯಾರ್ಥಿಗಳು ಅಥವಾ ಪೋಷಕರು ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯನ್ನು ಸಂಪರ್ಕಿಸಬಹುದು. ಪರೀಕ್ಷೆಗಳಿಗೆ ಹಾಜರಾಗಲು ಬೇಕಾದ ಹಾಲ್​ ಟಿಕೆಟ್​ ಒದಗಿಸಲು ಅಧಿಕಾರಿಗಳು ಸರಿಯಾದ ಕ್ರಮಗಳನ್ನು ತೆಗೆದುಕೊಳ್ಳುತ್ತಾರೆ ಎಂದು ಅವರು ಅನ್ಬುಕುಮಾರ್​ ಅವರು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.
ಜುಲೈ 19 ಮತ್ತು 22ರಂದು ನಡೆಯಲಿರುವ ಪರೀಕ್ಷೆಗಳಿಗೆ ಎಲ್ಲಾ ಸಿದ್ದತೆಗಳು ಈಗಾಗಲೇ ಪೂರ್ಣಗೊಂಡಿವೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ. ಜಿಲ್ಲಾಡಳಿತ, ಶಿಕ್ಷಣಾಧಿಕಾರಿಗಳು ಮತ್ತು ಗ್ರಾಮ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪರೀಕ್ಷೆಗಳನ್ನು ಸುಗಮವಾಗಿ ನಡೆಸಲು ತೆಗೆದುಕೊಂಡ ಕ್ರಮಗಳನ್ನು ಪರಿಶೀಲಿಸುತ್ತಿದ್ದಾರೆ. ಕೋವಿಡ್​-19 ಸಾಂಕ್ರಾಮಿಕ ಪರಿಸ್ಥಿತಿ ಹಿನ್ನೆಲೆಯಲ್ಲಿ ಹೊರಡಿಸಲಾದ ಪ್ರಮಾಣಿತ ಕಾರ್ಯಾಚರಣೆಯ ಕಾರ್ಯವಿಧಾನಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಅವರಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು.
ಈ ಬಾರಿ ಎಸ್​ಎಸ್​ಎಲ್​ಸಿ ಪರೀಕ್ಷೆ ಬೇರೆ ರೀತಿಯಾಗಿ ನಡೆಯಲಿದೆ. ಪ್ರಶ್ನೆ ಪತ್ರಿಕೆ ಮಾದರಿ ಬೇರೆ ರೀತಿಯಾಗಿರುತ್ತದೆ. ಅಂದರೆ ಸ್ಪರ್ಧಾತ್ಮಕ ಪರೀಕ್ಷೆ ಮಾದರಿಯಲ್ಲಿ ಇದೇ ಮೊದಲ ಬಾರಿಗೆ 10ನೇ ತರಗತಿ ಪರೀಕ್ಷೆ ನಡೆಸಲಾಗುತ್ತಿದೆ. ಬಹು ಆಯ್ಕೆ ಪ್ರಶ್ನೆಗಳ ಪ್ರಶ್ನೆ ಪತ್ರಿಕೆ ಹಾಗೂ ಒಎಮ್​ಆರ್​​ ಶೀಟ್ ನೀಡಲಾಗುತ್ತದೆ. ವಿದ್ಯಾರ್ಥಿಗಳು ತುಂಬಾ ಜಾಗರೂಕತೆಯಿಂದ ಒಎಮ್​ಆರ್​ ಶೀಟ್​​ನ್ನು ತುಂಬಬೇಕು.
ಒಎಂಆರ್​ ಶೀಟ್​​ ಬಗ್ಗೆ ವಿದ್ಯಾರ್ಥಿಗಳಿಗೆ ಗೊಂದಲ ನಿವಾರಿಸಲು, ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಒಎಂಆರ್​​ ಹಾಳೆಗಳನ್ನು ಭರ್ತಿ ಮಾಡುವ ಬಗ್ಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲು ಕೊಠಡಿ ಮೇಲ್ವಿಚಾರಕರಿಗೆ ಸೂಚಿಸಲಾಗಿದೆ.ಪರೀಕ್ಷೆ ನಡೆದ 15 ದಿನಗಳಲ್ಲಿ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಸಚಿವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು